ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ, ವೈರಲ್ ಆಯ್ತು ವೀಡಿಯೋ!

ಸರ್ಕಾರಿ ಅಧಿಕಾರಿಯೊಂದಿಗೆ ನಡೆದ ಮಾತಿನ ಚಕಮಕಿಯಲ್ಲಿ ತೊಡಗಿದ್ದ ಮಹಿಳೆಯೊಬ್ಬರು ಇದ್ದಕ್ಕಿದಂತೆ ಚಪ್ಪಲಿಯಿಂದ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. 

Last Updated : Oct 4, 2019, 07:46 AM IST
ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ, ವೈರಲ್ ಆಯ್ತು ವೀಡಿಯೋ! title=

ಭೋಪಾಲ್: ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ಹಂಚಿಕೆಯಲ್ಲಿ ಪಕ್ಷಪಾತ ಮಾಡಲಾಗಿದೆ ಎಂದು ಆರೋಪಿಸಿ ಮಹಿಳೆಯರ ಗುಂಪೊಂದು ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಘಟನೆ ಗುರುವಾರ ಗ್ವಾಲಿಯರ್ ನಲ್ಲಿ ನಡೆದಿದೆ. 

ಬಡವರಿಗೆ ಸರ್ಕಾರದ ವತಿಯಿಂದ ನೀಡಲಾಗುವ ಆಶ್ರಯ ಮನೆಗಳನ್ನು ತಪ್ಪಾಗಿ ಹಂಚಿಕೆ ಮಾಡಲಾಗಿದೆ , ಇದರಿಂದ ಜನರಿಗೆ ಸಮಸ್ಯೆಯಾಗಿದೆ ಎಂದು ಸರ್ಕಾರಿ ಅಧಿಕಾರಿಯೊಂದಿಗೆ ನಡೆದ ಮಾತಿನ ಚಕಮಕಿಯಲ್ಲಿ ತೊಡಗಿದ್ದ ಮಹಿಳೆಯೊಬ್ಬರು ಇದ್ದಕ್ಕಿದಂತೆ ಚಪ್ಪಲಿಯಿಂದ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ಸದ್ಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Trending News