VP Election 2022: NDA ಅಭ್ಯರ್ಥಿ ಜಗದೀಪ್ ಧನ್ಕಡ್ ದೇಶದ ಮುಂದಿನ ಉಪರಾಷ್ಟ್ರಪತಿ
Vice Presidential Election 2022:ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ದೇಶದ ಮುಂದಿನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನ್ಕಡ್ ಆಯ್ಕೆಗೊಂಡಿದ್ದಾರೆ. ಒಟ್ಟು 780 ಸಂಸದರ ಪೈಕಿ 724 ಸಂಸದರು ತಮ್ಮ ಮತ ಚಲಾಯಿಸಿದ್ದಾರೆ.
Vice Presidential Election 2022 Result: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನ್ಕಡ್ ಗೆಲುವು ಸಾಧಿಸಿದ್ದಾರೆ. ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಫಲಿತಾಂಶದ ನಂತರ ಜಗದೀಪ್ ಧನ್ಕಡ್ ಅವರ ಗ್ರಾಮದಲ್ಲಿನ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಗೆ ಶನಿವಾರ ಬೆಳಗ್ಗೆ 10 ಗಂಟೆಗೆ ಮತದಾನ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯಗೊಂಡಿದೆ. ಚುನಾವಣೆಯಲ್ಲಿ ಒಟ್ಟು 725 ಸಂಸದರು ತಮ ಮತ ಚಲಾಯಿಸಿದ್ದು, 50ಕ್ಕೂ ಹೆಚ್ಚು ಸಂಸದರು ಮತ ಚಲಾಯಿಸಿಲ್ಲ. ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ದೇಶದ ಹಿರಿಯ ಮುಖಂಡರು ಜಗದೀಪ್ ಧನ್ಕಡ್ ಅವರನ್ನು ಅಭಿನಂದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಉಪರಾಷ್ಟ್ರಪತಿ ಜಗದೀಪ್ ಧನ್ಕಡ್ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಲಿದ್ದಾರೆ.
Vice-Presidential Poll : ಮತದಾನ ಮುಕ್ತಾಯ, ನಿಮಗೆ ಗೊತ್ತಿರಲಿ ಈ 10 ಸಂಗತಿಗಳು!
725 ಸಂಸದರು ಮತ ಚಲಾಯಿಸಿದ್ದಾರೆ
ಸಂಜೆ 5 ಗಂಟೆಗೆ ಮತದಾನ ಪ್ರಕ್ರಿಯೆ ಅಂತ್ಯಗೊಂಡ ವೇಳೆಗೆ ಒಟ್ಟು 780 ಸಂಸದರ ಪೈಕಿ 725 ಸಂಸದರು ತಮ್ಮ ಮತ ಚಲಾಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತದಾನ ಮುಗಿದ ನಂತರ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಬೆಳಗ್ಗೆ 10 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. ಸಂಸತ್ತಿನ ಎರಡು ಸದನಗಳ ಒಟ್ಟು ಸದಸ್ಯರ ಸಂಖ್ಯೆ 788 ಆಗಿದ್ದು, ಮೇಲ್ಮನೆಯ ಎಂಟು ಸ್ಥಾನಗಳು ಪ್ರಸ್ತುತ ಖಾಲಿ ಇವೆ. ಇಂತಹ ಪರಿಸ್ಥಿತಿಯಲ್ಲಿ 780 ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು.
ಟಿಎಂಸಿ ಮತದಾನದಿಂದ ದೂರ ಉಳಿದಿದೆ
ತೃಣಮೂಲ ಕಾಂಗ್ರೆಸ್ ಈಗಾಗಲೇ ಮತದಾನದಿಂದ ದೂರ ಉಳಿಯುವುದಾಗಿ ಘೋಷಿಸಿತ್ತು. ಟಿಎಂಸಿ ಉಭಯ ಸದನಗಳಲ್ಲಿ ಒಟ್ಟು 39 ಸಂಸದರನ್ನು ಹೊಂದಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಮತ್ತು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನ್ಕಡ್ (71) ಅವರು ವಿರೋಧ ಪಕ್ಷದ ಜಂಟಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ (80) ಅವರನ್ನು ಎದುರಿಸಿದ್ದರು.
ಇದನ್ನೂ ನೋಡಿ-
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.