Wayanad Landslide Live Updates: ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ನೂರಾರು ಜನರು ಮಣ್ಣು ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಮೊದಲೇ ಮುನ್ಸೂಚನೆ ನೀಡಿತ್ತು.


COMMERCIAL BREAK
SCROLL TO CONTINUE READING

ಭೂಕುಸಿತ ಉಂಟಾಗಿರುವ ಪ್ರದೇಶವನ್ನು ಹತ್ತಿರದ ಪಟ್ಟಣಕ್ಕೆ ಸಂಪರ್ಕಿಸುವ ತಾತ್ಕಾಲಿಕ ಸೇತುವೆಯೂ ನಾಶವಾಗಿದ್ದರಿಂದ ಭಾರತೀಯ ಸೇನೆಯನ್ನು ಸಂಪರ್ಕಿಸಲಾಗಿದೆ. ಸೇನೆಯು 122 ಇನ್ಫೆಂಟ್ರಿ ಬೆಟಾಲಿಯನ್ (ಪ್ರಾದೇಶಿಕ ಸೇನೆ) ಮತ್ತು ಕಣ್ಣೂರಿನ ಡಿಎಸ್ಸಿ ಕೇಂದ್ರದ ಎರಡು ತುಕಡಿಗಳು ಸೇರಿದಂತೆ ನಾಲ್ಕು ತುಕಡಿಗಳನ್ನು ರಕ್ಷಣಾ ಕಾರ್ಯಾಚರಣೆಗೆ ಸಜ್ಜುಗೊಳಿಸಿದೆ.


ಇದನ್ನೂ ಓದಿ: ಅವ್ರು ಯಾರ ವಿರುದ್ಧ ಹೋರಾಟ ಮಾಡ್ತಾರೋ ಗೊತ್ತಿಲ್ಲ


ಸೋಮವಾರ ಮತ್ತು ಮಂಗಳವಾರ ಬೆಳಗಿನ ಜಾವದಲ್ಲಿ ಸುರಿದ ಭಾರೀ ಮಳೆಯು ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ದೊಡ್ಡಮಟ್ಟದ ಭೂಕುಸಿತಗಳನ್ನು ಉಂಟುಮಾಡಿದೆ. ಇದರ ಪರಿಣಾಮ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.


ಕೇರಳ ಸಿಎಂ ಪಿಣರಾಯಿ ವಿಜಯನ್ ಮಾತನಾಡಿ, ಕೇರಳ ಬ್ಯಾಂಕ್ ಈಗಾಗಲೇ ಸಿಎಂಡಿಆರ್‌ಎಫ್‌ಗೆ 50 ಲಕ್ಷ ರೂ., ಸಿಕ್ಕಿಂ ಮುಖ್ಯಮಂತ್ರಿ 2 ಕೋಟಿ ರೂ., ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ 5 ಕೋಟಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ದುರಂತಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯವು ಎರಡು ದಿನಗಳ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ. ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಆಚರಣೆಗಳನ್ನು ಮುಂದೂಡಲಾಗಿದೆ. ಶೋಕಾಚರಣೆಯ ಅಂಗವಾಗಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಬೇಕೆಂದು ವಿನಂತಿಸಲಾಗಿದೆ. 


ಇದನ್ನೂ ಓದಿಆಯವ್ಯಯ ಮೂಲಪಾಠವೇ ನಿರ್ಮಲಾಗೆ ಗೊತ್ತಿಲ್ಲ


ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಶೀಘ್ರವೇ ವಯನಾಡ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ರಕ್ಷಣಾ ತಂಡವನ್ನು ಕಳುಹಿಸಿದ್ದು, ಕೇಂದ್ರ ಸರ್ಕಾರವೂ ಸಹಾಯ ಮಾಡಬೇಕಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.