ಮುಂಬೈ: ಬಾಬ್ರಿ ಮಸಿದಿಯನ್ನು ನಾವು ಕೇವಲ 17 ನಿಮಿಷಗಳಲ್ಲಿ ಕೆಡವಿದ್ದೆವು. ಆದರೆ ರಾಮಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ರೂಪಿಸಲು ಎಷ್ಟು ಸಮಯ ಬೇಕು ಎಂದು ಶಿವಸೇನೆ ಪ್ರಶ್ನಿಸಿದೆ.
ದೇಶದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಮ ಮಂದಿರ ನಿರ್ಮಾಣ ವಿಚಾರ ಸಾಕಷ್ಟು ಚರ್ಚೆಗೆ ಒಳಗಾಗುತ್ತಿದೆ. ಈ ಬೆನ್ನಲೇ ಶಿವಸೇನೆ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದು, ರಾಮಮಂದಿರ ನಿರ್ಮಾಣ ಸಂಬಂಧ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Humne 17 minute mein Babri tod di, to kanoon banane mein kitna time lagta hai?Rashtrapati Bhawan se lekar UP tak BJP ki sarkar hai. Rajya Sabha mein aise bahot sansad hai jo Ram mandir ke saath khade rahenge,jo virodh karega uska desh mai ghumna mushkil hoga:Sanjay Raut,Shiv Sena pic.twitter.com/62zlo0eZJ5
— ANI (@ANI) November 23, 2018
ಉತ್ತರಪ್ರದೇಶದಲ್ಲಿ, ಕೇಂದ್ರದಲ್ಲಿ ಹಾಗೂ ರಾಷ್ಟ್ರಪತಿ ಭವನದಲ್ಲಿಯೂ ಬಿಜೆಪಿ ಅಧಿಕಾರದಲ್ಲಿದೆ. ಆಡಳಿತಾರೂಢ ಸರ್ಕಾರ ಶೀಘ್ರಗತಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾನೂನು ರಚಿಸಬೇಕು. ರಾಮ ಮಂದಿರ ನಿರ್ಮಾಣದ ಪರವಾಗಿ ರಾಜ್ಯಸಭೆಯಲ್ಲಿ ಹಲವಾರು ಸದಸ್ಯರಿದ್ದಾರೆ. ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಇವರು ಇನ್ನು ಮುಂದೆ ದೇಶದಲ್ಲಿ ಓಡಾಡಬೇಕಾದರೆ, ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.