ಮುಂಬೈ: ಅತೃಪ್ತ ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅತೃಪ್ತ ಶಾಸಕರು, ನಾಳೆ ನಡೆಯಲಿರುವ ಕಲಾಪಕ್ಕೆ ಯಾವುದೇ ಕಾರಣಕ್ಕೂ ಹಾಜರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅತೃಪ್ತ ಶಾಸಕರ ಬಗ್ಗೆ ನಿಯಮಗಳ ಪ್ರಕಾರ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂಕೋರ್ಟ್ ಸ್ಪೀಕರ್ಗೆ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ತೀರ್ಪಿನ ನಂತರ, ಮುಂಬೈನಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, "ನಾವು ಸುಪ್ರೀಂಕೋರ್ಟ್ನ ತೀರ್ಪನ್ನು ಗೌರವಿಸುತ್ತೇವೆ, ನಾವೆಲ್ಲರೂ ಒಟ್ಟಾಗಿರುತ್ತೇವೆ. ನಮ್ಮ ನಿರ್ಧಾರ ದೃಢವಾಗಿದ್ದು, ವಿಧಾನಸಭೆಗೆ ಹೋಗುವ ಪ್ರಶ್ನೆಯೇ ಇಲ್ಲ. ನಾಳೆ ನಡೆಯಲಿರುವ ಕಲಾಪಕ್ಕೆ ಯಾವುದೇ ಕಾರಣಕ್ಕೂ ಹಾಜರಾಗುವುದಿಲ್ಲ" ಎಂದು ತಿಳಿಸಿದ್ದಾರೆ.
Rebel #Karnataka MLAs in #Mumbai: We honour Supreme Court's verdict. We all are together. We stand by our decision. There is no question of going to the Assembly. pic.twitter.com/56z1XdPnMj
— ANI (@ANI) July 17, 2019