'ರಾಷ್ಟ್ರೀಯ ಭದ್ರತೆ ನಿರ್ವಹಣೆಯಲ್ಲಿ ಕೇಂದ್ರದ ಸಹಾಯ ಅಗತ್ಯ'

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಿ ಭೇಟಿಯ ನಂತರ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

Written by - Prashobh Devanahalli | Last Updated : Mar 24, 2022, 05:34 PM IST
  • ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
  • ಪ್ರಧಾನಿ ಭೇಟಿಯ ನಂತರ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
 'ರಾಷ್ಟ್ರೀಯ ಭದ್ರತೆ ನಿರ್ವಹಣೆಯಲ್ಲಿ ಕೇಂದ್ರದ ಸಹಾಯ ಅಗತ್ಯ' title=

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಪ್ರಧಾನಿ ಭೇಟಿಯ ನಂತರ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

'ರಾಷ್ಟ್ರೀಯ ಭದ್ರತೆಯನ್ನು ಕಾಯ್ದುಕೊಳ್ಳಲು ನಮಗೆ ಕೇಂದ್ರದ ಬೆಂಬಲ ಬೇಕು.ಪಂಜಾಬ್‌ನ ಆರ್ಥಿಕ ಸ್ಥಿತಿ ಹದಗೆಟ್ಟಿದೆ.ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ನಾವು 2 ವರ್ಷಗಳ ಕಾಲ ವರ್ಷಕ್ಕೆ 50,000 ಕೋಟಿ ರೂಪಾಯಿಗಳ ಪ್ಯಾಕೇಜ್‌ಗೆ ಬೇಡಿಕೆ ಇಟ್ಟಿದ್ದೇವೆ" ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಪ್ರಧಾನಿಯೊಂದಿಗಿನ ಭೇಟಿಯಲ್ಲಿ ಹೇಳಿದರು.

ಇದನ್ನೂ ಓದಿ: Punjab CM : ಭಗತ್ ಸಿಂಗ್ ಪುಣ್ಯತಿಥಿಯಂದು ಸರ್ಕಾರಿ ರಜೆ ಘೋಷಿಸಿದ ಪಂಜಾಬ್ ಸಿಎಂ!

 ಪಂಜಾಬ್‌ನ ಒಟ್ಟು 177 ಕ್ಷೇತ್ರಗಳ ಪೈಕಿ 92ರಲ್ಲಿ ಮಾನ್‌ ಅವರ ಆಮ್‌ ಆದ್ಮಿ ಪಕ್ಷ ಗೆಲುವು ಸಾಧಿಸಿತ್ತು. ಉತ್ತರ ರಾಜ್ಯದಲ್ಲಿ ಈ ಹಿಂದೆ ಆಡಳಿತಾರೂಢ ಸರ್ಕಾರವಾಗಿದ್ದ ಕಾಂಗ್ರೆಸ್ ಕೇವಲ 18 ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಯಿತು.ಮಾನ್ ಕಳೆದ ವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.ಪಂಜಾಬ್‌ನಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷ ಆಪ್ ಪ್ರಚಂಡ ವಿಜಯವನ್ನು ದಾಖಲಿಸಿದ ನಂತರ ಮಾನ್ ಅವರು ಪ್ರಧಾನಿಯೊಂದಿಗಿನ ಮೊದಲ ಭೇಟಿಯಾಗಿದೆ.

ಇದನ್ನೂ ಓದಿ: ಭ್ರಷ್ಟಾಚಾರ-ವಿರೋಧಿ ಸಹಾಯವಾಣಿಗೆ ಚಾಲನೆ ನೀಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್

ಸಭೆಯ ಅಜೆಂಡಾ ಸ್ಪಷ್ಟವಾಗಿಲ್ಲವಾದರೂ, ಇದು ಎಎಪಿ ನಾಯಕರ ಸೌಜನ್ಯದ ಭೇಟಿ ಎಂದು ಪರಿಗಣಿಸಲಾಗಿದೆ. ಪಂಜಾಬ್‌ಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲು ಸೌಜನ್ಯ ಭೇಟಿಗಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಸಮಯ ಕೇಳಿದ್ದೇನೆ ಎಂದು ಮಾನ್ ಈ ಹಿಂದೆ ಟ್ವೀಟ್ ಮಾಡಿದ್ದರು.

ಮಾರ್ಚ್ 16 ರಂದು ಪಂಜಾಬ್ ಸಿಎಂ ಆಗಿದ್ದಕ್ಕಾಗಿ ಎಎಪಿ ನಾಯಕನನ್ನು ಪ್ರಧಾನಿ ಅಭಿನಂದಿಸಿದಾಗ ಮನ್ ಮತ್ತು ಪಿಎಂ ಮೋದಿ ಟ್ವಿಟರ್‌ನಲ್ಲಿ ಸಂವಾದ ನಡೆಸಿದ್ದರು."ಪಂಜಾಬ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್ ಅವರಿಗೆ ಅಭಿನಂದನೆಗಳು.ಪಂಜಾಬ್ ಬೆಳವಣಿಗೆ ಮತ್ತು ರಾಜ್ಯದ ಜನರ ಕಲ್ಯಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ" ಎಂದು ಮೋದಿ ಟ್ವೀಟ್ ಮಾಡಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News