ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ದೇವೇಗೌಡ ಅವರು, ದೇಶದಲ್ಲಿ ಭಯೋತ್ಪಾದನೆ ನಾಶಕ್ಕೆ ಕೇಂದ್ರಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಇದೇ ರೀತಿ ಉಗ್ರರು ದಾಳಿ ನಡೆಸಿದ್ದಾಗ ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಆಗ ಎಲ್ಲ ಪಕ್ಷಗಳೂ ಕೇಂದ್ರದ ಬೆಂಬಲಕ್ಕೆ ನಿಂತಿದ್ದವು, ಈ ಬಾರಿ ಕೂಡ ದೇಶದಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲು ಕೇಂದ್ರದ ಜೊತೆ ಕೈಜೋಡಿಸುವುದಾಗಿ ಹೇಳಿದರು.


ಈ ಸಂಬಂಧ ಶನಿವಾರ ಕೇರಳದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು, ದೇಶದ ಹಿತರಕ್ಷಣೆಗಾಗಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲಾಗುವುದು ಎಂದು ದೇವೇಗೌಡರು ತಿಳಿಸಿದರು.