ಡ್ರಗ್ಸ್ ಮುಕ್ತ ಪಂಜಾಬ್ ಮಾಡುವುದಾಗಿ ಹೇಳಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ (ಫೆಬ್ರವರಿ 13) ಪಟಿಯಾಲದಲ್ಲಿ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರಕ್ಕೆ ಅವಕಾಶ ನೀಡುವಂತೆ ಪಂಜಾಬ್‌ನ ಜನರಿಗೆ ಮನವಿ ಮಾಡಿದ್ದಾರೆ.
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ (ಫೆಬ್ರವರಿ 13) ಪಟಿಯಾಲದಲ್ಲಿ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮತ್ತು ಬಿಜೆಪಿ ಸರ್ಕಾರಕ್ಕೆ ಅವಕಾಶ ನೀಡುವಂತೆ ಪಂಜಾಬ್‌ನ ಜನರಿಗೆ ಮನವಿ ಮಾಡಿದ್ದಾರೆ.
ಮಾದಕ ದ್ರವ್ಯ ಮುಕ್ತ ಪಂಜಾಬ್‌ನ ಭರವಸೆ ನೀಡಿದ ಶಾ, "ನಾವು ಪಂಜಾಬ್‌ನಿಂದ ಡ್ರಗ್ಸ್ ನಿರ್ಮೂಲನೆ ಮಾಡುತ್ತೇವೆ. ಪಂಜಾಬ್ ಅನ್ನು ಡ್ರಗ್ ಮುಕ್ತಗೊಳಿಸುವುದು ನಮ್ಮ ಗುರಿ" ಎಂದು ಹೇಳಿದರು.ಪಂಜಾಬ್‌ನ ಅಭಿವೃದ್ಧಿಗಾಗಿ ಕೇಂದ್ರದೊಂದಿಗೆ ಒಟ್ಟಾಗಿ ಕೆಲಸ ಮಾಡುವ ಸರ್ಕಾರವನ್ನು ನೀವು ಆರಿಸಬೇಕೆಂದು ನಾನು ಬಯಸುತ್ತೇನೆ ಎಂದು ಶಾ ಹೇಳಿದರು.
ಇದನ್ನೂ ಓದಿ : ಜಾತಿಗಣತಿ ವರದಿಯಿಂದ ಒಬಿಸಿ ಮೀಸಲಾತಿ ಅಡ್ಡಿ ಪರಿಹರಿಸಬಹುದು: ಸಿದ್ದರಾಮಯ್ಯ
ಲುಧಿಯಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಶಾ, ರಾಜ್ಯದ 4 ನಗರಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾಖೆಯ ಕಚೇರಿಗಳ ಭರವಸೆ ನೀಡಿದರು.
"ಪಂಜಾಬ್‌ನಲ್ಲಿ ಸರ್ಕಾರ ರಚನೆಯಾದ ಮೇಲೆ, ನಾವು ರಾಜ್ಯದ 4 ನಗರಗಳಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶಾಖೆಗಳನ್ನು ಸ್ಥಾಪಿಸುತ್ತೇವೆ. ಮಾದಕ ದ್ರವ್ಯ ತಡೆಗಟ್ಟುವಿಕೆಗಾಗಿ, ನಾವು ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಕಾರ್ಯಪಡೆಯನ್ನು ರಚಿಸುತ್ತೇವೆ" ಎಂದು ಅಮಿತ್ ಶಾ ಹೇಳಿದರು.
ಇದನ್ನೂ ಓದಿ : ಕೋರ್ಟ್ ಆವರಣದಲ್ಲಿ ದುರ್ವರ್ತನೆ ಆರೋಪ: ವಕೀಲ ಜಗದೀಶ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ
ಫೆಬ್ರವರಿ 20 ರಂದು ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದೆ ಮತ್ತು ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.ರಾಜ್ಯದಲ್ಲಿ 2017 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಗಳಿಸಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.