ನವದೆಹಲಿ: ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಪಕ್ಷದಲ್ಲಿಲ್ಲದ ಕಾರಣ ಪಕ್ಷವನ್ನು ಮುನ್ನಡೆಸಲು ಆಗ್ರಹಿಸಲಾಗುವುದು ಎಂದು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಬಯಸುವ ವ್ಯಕ್ತಿಗಳು ದೇಶಾದ್ಯಂತ ಪರಿಚಿತರಾಗಿರಬೇಕು ಮತ್ತು ಕನ್ಯಾಕುಮಾರಿಯಿಂದ ಕಾಶ್ಮೀರ ಮತ್ತು ಪಶ್ಚಿಮ ಬಂಗಾಳದಿಂದ ಗುಜರಾತ್‌ವರೆಗೆ ಬೆಂಬಲವನ್ನು ಹೊಂದಿರಬೇಕು ಎಂದು ಹೇಳಿದರು.


ಈ ವಿಚಾರವಾಗಿ ಮಾತನಾಡಿದ ಖರ್ಗೆ ರಾಹುಲ್ ಗಾಂಧಿ ಹೊರತುಪಡಿಸಿ ಪಕ್ಷದಲ್ಲಿ ಪರ್ಯಾಯ ನಾಯಕರಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.


ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ನೇತೃತ್ವ ವಹಿಸಲು ಸಿದ್ದರಿಲ್ಲ ಎನ್ನುವ ವರದಿಗೆ ಪ್ರತಿಕ್ರಿಯಿಸಿದ ಖರ್ಗೆ ದೇಶಕ್ಕಾಗಿ ಮತ್ತು  ಆರ್‌ಎಸ್‌ಎಸ್-ಬಿಜೆಪಿ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಅವರನ್ನು ಮತ್ತೆ ಪಕ್ಷದ ಚುಕ್ಕಾಣಿ ಹಿಡಿಯಲು ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.


ಇದನ್ನೂ ಓದಿ: ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು!


ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಸಿಡಬ್ಲ್ಯೂಸಿ, ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ದಿನಾಂಕಗಳ ವೇಳಾಪಟ್ಟಿಯನ್ನು ಅನುಮೋದಿಸಲು ಭಾನುವಾರ ವರ್ಚುವಲ್ ಸಭೆಯನ್ನು ನಡೆಸಲಿದೆ. 


ಸಿಡಬ್ಲ್ಯೂಸಿ ಸಭೆಯ ಅಧ್ಯಕ್ಷತೆಯನ್ನು ಸೋನಿಯಾ ಗಾಂಧಿ ವಹಿಸಲಿದ್ದಾರೆ. ರಾಹುಲ್ ಗಾಂಧಿ ಮತ್ತೆ ಪಕ್ಷದ ಮುಖ್ಯಸ್ಥರಾಗುವಂತೆ ಹಲವು ನಾಯಕರು ಸಾರ್ವಜನಿಕವಾಗಿ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗುವುದಿಲ್ಲ ಎಂಬ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ಆಂತರಿಕ ಮೂಲಗಳು ಹೇಳಿವೆ.


ಇದನ್ನೂ ಓದಿ: Viral Video: ಮಲಗಿದ್ದ ಮಹಿಳೆಯ ಮೇಲೆ ಹೆಡೆ ಎತ್ತಿ ಕುಳಿತ ನಾಗರಹಾವು!


2019 ರಲ್ಲಿ ನಡೆದ ಸಂಸತ್ತಿನ ಚುನಾವಣೆಯಲ್ಲಿ ಪಕ್ಷವು ಸತತ ಎರಡನೇ ಸೋಲನ್ನು ಅನುಭವಿಸಿದ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದಾದ ನಂತರ ಸೋನಿಯಾ ಗಾಂಧಿ ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. 


 


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.