Weather Report: ಈ ರಾಜ್ಯಗಳಲ್ಲಿ ಮುಂದಿನ 2 ದಿನಗಳ ಕಾಲ ಭರ್ಜರಿ ಮಳೆ ಸಾಧ್ಯತೆ!
Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ವಾತಾವರಣ ಕಡಿಮೆಯಾಗುತ್ತಿದ್ದು, ಹಬೆ ಹೆಚ್ಚಾಗುತ್ತಿದೆ. ಒಣಹವೆ ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ನವದೆಹಲಿ: ದೇಶದಲ್ಲಿ ಚಳಿಗಾಲದ ನಡುವೆಯೂ ಬಹುತೇಕ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣವಿದೆ. ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಂಜಿನ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ. ಮುಂದಿನ 2 ದಿನಗಳ ಕಾಲ ದೇಶದ ಕೆಲವು ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ.
ರಾಷ್ಟ್ರ ರಾಜಧಾನಿ ದೆಹಲಿ NCRನ ಕೆಲವು ಭಾಗಗಳಲ್ಲಿ ಸೋಮವಾರ (ಫೆ.19) ರಾತ್ರಿಯಿಂದ ಲಘು ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಪ್ರಕಟಣೆಯಲ್ಲಿ ತಿಳಿಸಿದೆ. ಮಂಗಳವಾರ ಮತ್ತು ಬುಧವಾರ ಈ ಪ್ರದೇಶದಲ್ಲಿ ತುಂತುರು ಮಳೆ ಮತ್ತು ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು ಹೇಳಲಾಗಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಕ್ರಮವಾಗಿ 12-14 ಡಿಗ್ರಿ ಸೆಲ್ಸಿಯಸ್ ಮತ್ತು 27-28 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.
ಇದನ್ನೂ ಓದಿ: Online Shopping: ಆನ್‌ಲೈನ್ ಶಾಪಿಂಗ್ ಕ್ರೇಜ್ ಮಹಿಳೆಯರಿಗಿಂತ ಪುರುಷರಿಗೇ ಹೆಚ್ಚು! ಇಲ್ಲಿದೆ ವರದಿ
ಫೆಬ್ರವರಿ 21ರವರೆಗೆ ದೆಹಲಿ NCRನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಇದಲ್ಲದೆ ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿಯೂ ಸೋಮವಾರದಿಂದ ಬುಧವಾರದವರೆಗೆ ಲಘು ಮಳೆಯಾಗುವ ಸಾಧ್ಯೆಯಿದೆ ಎಂದು ಹೇಳಲಾಗಿದೆ.
ಫೆಬ್ರವರಿ 21ರವರೆಗೆ ಪಂಜಾಬ್‌ನ ವಿವಿಧ ಭಾಗಗಳಲ್ಲಿ ಗುಡುಗು-ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯೆತೆಯಿದೆ. ಫೆಬ್ರವರಿ 19 ರಿಂದ 21ರವರೆಗೆ ಹರಿಯಾಣ, ನವದೆಹಲಿ, ಚಂಡೀಗಢ ಮತ್ತು ಪಶ್ಚಿಮ ಉತ್ತರಪ್ರದೇಶ, ಫೆ.19 ರಿಂದ 20ರವರೆಗೆ ರಾಜಸ್ಥಾನ, ಫೆ.20 ರಿಂದ 22ರವರೆಗೆ ಪೂರ್ವ ಯುಪಿಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕರ್ನಾಟಕದಲ್ಲಿ ತಾಪಮಾನ ಹೆಚ್ಚಳ!
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ವಾತಾವರಣ ಕಡಿಮೆಯಾಗುತ್ತಿದ್ದು, ಹಬೆ ಹೆಚ್ಚಾಗುತ್ತಿದೆ. ಒಣಹವೆ ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೆಲವು ಭಾಗಗಳಲ್ಲಿ ಬೆಳಗಿನ ಜಾವ ಅಲ್ಪಮಟ್ಟಿನ ಚಳಿ ಕಾಣಿಸಿಕೊಳ್ಳುತ್ತಿದ್ದು, ಕರಾವಳಿ ಭಾಗದಲ್ಲಿ ತಾಪಮಾನ ಹೆಚ್ಚಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31.2 ಮತ್ತು ಕನಿಷ್ಠ ತಾಪಮಾನ 17.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲಿ ಮುಂಜಾನೆ ಚಳಿಯ ವಾತಾವರಣವಿರುತ್ತದೆ ಎಂದು ವರಿದಯಾಗಿದೆ.
ಇದನ್ನೂ ಓದಿ: Daily GK Quiz: ಅಮೆರಿಕ ದೇಶದ ಮೊದಲ ಅಧ್ಯಕ್ಷರು ಯಾರು..?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.