Weather Update 17-08-2023: ಮುಂದಿನ ನಾಲ್ಕು ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪರ್ವತ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈಗಾಗಲೇ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ತಸ್ತಗೊಂಡಿದ್ದು, 71 ಮಂದಿ ಪ್ರಾಣಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: “ಆಧುನಿಕ ಬಟ್ಟೆಗಳು ಲೈಂಗಿಕತೆಗೆ ಪ್ರಚೋದನಕಾರಿ ಎಂದು ಪರಿಗಣಿಸಬಾರದು”: ‘ಸುಪ್ರೀಂ’ ಕೈಪಿಡಿ
IMD ಪ್ರಕಾರ, ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 15 ರಿಂದ 19 ರವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಹೇಳಿದೆ.
ಮತ್ತೊಂದೆಡೆ ಮುಂದಿನ ಎರಡು ದಿನಗಳಲ್ಲಿ ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಸ್ಕೈಮೆಟ್ ಉಪಾಧ್ಯಕ್ಷ ಮಹೇಶ್ ಪಲಾವತ್ ಹೇಳಿದ್ದಾರೆ.
ಹವಾಮಾನ ಇಲಾಖೆ ಡೆಹ್ರಾಡೂನ್ ಪ್ರಕಾರ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ, ಡೆಹ್ರಾಡೂನ್, ತೆಹ್ರಿ, ಪೌರಿ ಮತ್ತು ಅಲ್ಮೋರಾ ಜಿಲ್ಲೆಗಳಲ್ಲಿ ಮತ್ತು ಉತ್ತರಾಖಂಡದ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಿದೆ. ಇದಲ್ಲದೆ, ಉತ್ತರಾಖಂಡದ ಪೌರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: ಇನ್ಮುಂದೆ ವಿದೇಶದಲ್ಲೂ ಭಾರತೀಯರು ಬಳಸಬಹುದು UPI ಪೇಮೆಂಟ್ಸ್! ಈ ಟಿಪ್ಸ್ ಫಾಲೋ ಮಾಡಿದ್ರೆ ಸಾಕು
ಕರ್ನಾಟಕದಲ್ಲಿ ವರುಣನ ಸಿಂಚನ:
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಆಗಸ್ಟ್ 20ರವರೆಗೆ ರಾಜ್ಯದಲ್ಲಿ ಮಳೆ ಕೊರತೆ ಕಾಣಿಸಲಿದೆ. ಆದರೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ. ಇನ್ನೊಂದೆಡೆ ಮಲೆನಾಡಿನಲ್ಲಿಯೂ ಅಲ್ಲಲ್ಲಿ ಚದುರಿದ ಮಳೆ ಆಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.