Rain Update: ಕರ್ನಾಟಕಕ್ಕೆ ಸೈಕ್ಲೋನ್ ಭೀತಿ; ಮುಂದಿನ 24 ಗಂಟೆಯಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Weather Update 27-04-2023: ಈ ಮಧ್ಯೆ ಬೆಂಗಳೂರು ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Written by - Bhavishya Shetty | Last Updated : Apr 27, 2023, 07:34 AM IST
    • ಬೆಂಗಳೂರು ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ
    • ಮುಂದಿನ 24 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ
    • ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ
Rain Update: ಕರ್ನಾಟಕಕ್ಕೆ ಸೈಕ್ಲೋನ್ ಭೀತಿ; ಮುಂದಿನ 24 ಗಂಟೆಯಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ title=
Weather Update

Weather Update 27-04-2023: ದಕ್ಷಿಣ ಒಳಕರ್ನಾಟಕದ ಕೆಲವು ಸ್ಥಳಗಳಲ್ಲಿ, ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ, ಬೀದರ್, ಬಾಗಲಕೋಟೆ, ಹಾವೇರಿ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ವರದಿ ಪ್ರಕಾರ, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಈ ಮಧ್ಯೆ ಬೆಂಗಳೂರು ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Bournvita: ಮಕ್ಕಳ ಜೀವಕ್ಕೆ ಕುತ್ತು ತರಬಹುದು ಬೌರ್ನ್‌ವಿಟಾ! ಕಂಪನಿಗೆ NCPCR ನೋಟಿಸ್

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು ಸಹಿತ ಮಳೆಯೊಂದಿಗೆ ಮಿಂಚು ಮತ್ತು ಬಿರುಗಾಳಿಯು ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ.

ಮುಂದಿನ 24 ಗಂಟೆಗಳಲ್ಲಿ, ಗುಡುಗು ಸಹಿತ ಮಳೆಯೊಂದಿಗೆ ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ,ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಏಪ್ರಿಲ್ 28ರಿಂದ ಈ ರಾಜ್ಯಗಳಲ್ಲಿ ಮತ್ತೆ ಮಳೆ ಆರಂಭ:

ಈ ಬಾರಿಯ ಹವಾಮಾನ ಮುನ್ಸೂಚನೆಯು ವಿಜ್ಞಾನಿಗಳನ್ನೇ ಆಶ್ಚರ್ಯಗೊಳಿಸಿವೆ. ಮಾರ್ಚ್ ಕೊನೆಯ ವಾರದಿಂದ ಆರಂಭವಾದ ಹಿತಕರ ವಾತಾವರಣ ಇಲ್ಲಿಯವರೆಗೂ ಮುಂದುವರಿದಿದೆ. ಇದರಿಂದ ಇಲ್ಲಿಯವರೆಗೂ ಬಿಸಿಲಿನ ತಾಪದಿಂದ ಜನರು ಕೊಂಚ ನಿರಾಳರಾಗಿದ್ದಾರೆ. ಇದೀಗ ಏಪ್ರಿಲ್ 28ರಿಂದ ಮತ್ತೆ ಗುಡುಗು, ಬಿರುಗಾಳಿ ಸಹಿತ ಮಳೆಯ ಆರ್ಭಟ ಶುರುವಾಗಲಿದೆ. ಈ ಕಾರಣದಿಂದಾಗಿ, ಉತ್ತರದಿಂದ ದಕ್ಷಿಣಕ್ಕೆ ಮತ್ತು ಪಶ್ಚಿಮದಿಂದ ಪೂರ್ವ ಭಾರತದವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ವಿದರ್ಭ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಂಡಮಾರುತದ ಪರಿಚಲನೆ ರೂಪುಗೊಂಡಿದೆ. ಈ ಚಂಡಮಾರುತದ ಪರಿಚಲನೆಯಿಂದ ದಕ್ಷಿಣ ಒಳ ಕರ್ನಾಟಕದವರೆಗೆ ಪರಿಣಾಮ ಕಾಣಿಸಿಕೊಳ್ಳಲಿದೆ. ಇದರಿಂದಾಗಿ ವಾತಾವರಣದಲ್ಲಿ ಏರುಪೇರು ಉಂಟಾಗಿದ್ದು, ಬಿಸಿಲಿನ ತಾಪ ತನ್ನ ಉಗ್ರ ಸ್ವರೂಪ ಕೊಂಚ ಕಡಿಮೆಯಾಗಿದೆ. ಈ ಹವಾಮಾನ ಬದಲಾವಣೆಯಿಂದಾಗಿ, ಕಳೆದ 24 ಗಂಟೆಗಳಲ್ಲಿ ದಕ್ಷಿಣ ಅಸ್ಸಾಂನ ಹಲವು ಪ್ರದೇಶಗಳಲ್ಲಿ ಹಗುರದಿಂದ ಭಾರೀ ಮಳೆಯಾಗಿದೆ. ತೆಲಂಗಾಣ, ಒಡಿಶಾ, ಜಾರ್ಖಂಡ್, ಛತ್ತೀಸ್‌ಗಢ, ಆಗ್ನೇಯ ಮಧ್ಯಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕ, ಹಿಮಾಚಲ ಪ್ರದೇಶ, ಕಾಶ್ಮೀರ, ಬಿಹಾರ ಮತ್ತು ಪೂರ್ವ ಗುಜರಾತ್‌ನಲ್ಲಿ ಹಲವೆಡೆ ಲಘು ಮಳೆಯಾಗಿದೆ.

ಹವಾಮಾನ ತಜ್ಞರ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಪೂರ್ವ ರಾಜಸ್ಥಾನದ ಕೆಲವು ಭಾಗಗಳಲ್ಲಿ ಲಘು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ-ಎನ್‌ಸಿಆರ್‌ನ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಸಿಕ್ಕಿಂ, ಅಸ್ಸಾಂ, ಅರುಣಾಚಲ ಪ್ರದೇಶ, ಕರ್ನಾಟಕದ ಒಳಭಾಗ, ದಕ್ಷಿಣ ಮಧ್ಯ ಮಹಾರಾಷ್ಟ್ರ ಮತ್ತು ಲಕ್ಷದ್ವೀಪದ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ವರದಿಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ: ಬಿಜೆಪಿ, ಆರ್‌ಎಸ್‌ಎಸ್‌ಗೆ ನಾನು ಕೊರೊನಾವೈರಸ್: ದಿಗ್ವಿಜಯ ಸಿಂಗ್

ಸ್ಕೈಮೆಟ್ ಏಜೆನ್ಸಿ ಪ್ರಕಾರ, ಇಂದು ಮತ್ತು ನಾಳೆ ಹಗುರದಿಂದ ಸಾಧಾರಣ ಮಳೆ ಮತ್ತು ಪಶ್ಚಿಮ ಹಿಮಾಲಯದ ಮೇಲೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮೇಲ್ಭಾಗದಲ್ಲಿ ಹಿಮಪಾತವಾಗಬಹುದು. ವಿದರ್ಭ, ತೆಲಂಗಾಣ, ದಕ್ಷಿಣ ಛತ್ತೀಸ್‌ಗಢ ಮತ್ತು ಮರಾಠವಾಡ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳದಲ್ಲಿ ಒಂದು ಅಥವಾ ಎರಡು ಭಾರಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೇ ಮೊದಲ ವಾರದವರೆಗೆ ಹವಾಮಾನವು ಆಹ್ಲಾದಕರವಾಗಿರುತ್ತದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಬಹಿರಂಗಪಡಿಸಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News