ನವದೆಹಲಿ: ಶನಿವಾರದಂದು, ರಾಷ್ಟ್ರ ರಾಜಧಾನಿಯಲ್ಲಿ ತೀವ್ರ ಬಿಸಿಗಾಳಿ ಆವರಿಸಿದ್ದು, ನಗರದಲ್ಲಿ ತಾಪಮಾನವು 42.2 ಡಿಗ್ರಿ ಸೆಲ್ಸಿಯಸ್‌ಗೆ ಏರಿದೆ. ದೆಹಲಿಯು ಕಳೆದ 72 ವರ್ಷಗಳಲ್ಲಿ ಎರಡನೇ ಅತಿ ಹೆಚ್ಚು ಉಷ್ಣಾಂಶ ಏಪ್ರಿಲ್ ನಲ್ಲಿ ದಾಖಲಾಗಿದೆ. ನಿನ್ನೆ ಸಹ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿತ್ತು ಎಂದು ಪಿಟಿಐ ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Arecanut Today Price: ಅಡಿಕೆ ಧಾರಣೆಯಲ್ಲಿ ಮತ್ತೆ ಭರ್ಜರಿ ಏರಿಕೆ


ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಡಾ ಎಂ ಮೊಹಾಪಾತ್ರ ಅವರ ಪ್ರಕಾರ, ಏಪ್ರಿಲ್ 2022 ರಲ್ಲಿ ವಾಯುವ್ಯ ಮತ್ತು ಮಧ್ಯ ಭಾರತದ ಸರಾಸರಿ ಗರಿಷ್ಠ ತಾಪಮಾನವು ಕಳೆದ 122 ವರ್ಷಗಳಲ್ಲಿ ಕ್ರಮವಾಗಿ 35.90 ಡಿಗ್ರಿ ಸೆಲ್ಸಿಯಸ್ ಮತ್ತು 37.78 ಡಿಗ್ರಿ ಸೆಲ್ಸಿಯಸ್ ಆಗಿದೆ.


ಪಶ್ಚಿಮ-ಮಧ್ಯ ಮತ್ತು ವಾಯುವ್ಯ ಭಾರತದ ಹೆಚ್ಚಿನ ಭಾಗಗಳು ಮತ್ತು ಈಶಾನ್ಯ ಭಾರತದ ಉತ್ತರ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಡಾ ಮೊಹಾಪಾತ್ರ ಹೇಳಿದರು.


IMD ಅಧಿಕಾರಿಯು ಭಾರತದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯದಿಂದ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ವಾಯುವ್ಯ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಮತ್ತು ಆಗ್ನೇಯ ಪರ್ಯಾಯ ದ್ವೀಪದಲ್ಲಿ ಮಳೆಯು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ಹೇಳಿದ್ದಾರೆ. 


ಭಾನುವಾರವೂ ಬಿಸಿಗಾಳಿ ಮುನ್ಸೂಚನೆ: 


ಭಾನುವಾರದಂದು ಶಾಖದ ಅಲೆಯು ಪ್ರದೇಶದಾದ್ಯಂತ ವ್ಯಾಪಿಸುವ ಸಾಧ್ಯತೆಯಿದೆ. ಸೋಮವಾರ ಮತ್ತು ಬುಧವಾರದಂದು ನಗರದಲ್ಲಿ ಗುಡುಗು ಸಹಿತ ಮಳೆಯಾಗುವುದರಿಂದ ಜನರು ಸ್ವಲ್ಪ ನೆಮ್ಮದಿ ಪಡೆಯುವ ಸಾಧ್ಯತೆಯಿದೆ. ಮಂಗಳವಾರ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ ಎಂದು IMD ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: Vegetable price: ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿದೆ ನಿಂಬೆ ದರ: ಇಲ್ಲಿದೆ ಇಂದಿನ ತರಕಾರಿಗಳ ಬೆಲೆ


ದಿನದ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಭಾನುವಾರದಂದು 43 ಮತ್ತು 25 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು IMD ಅಧಿಕಾರಿಗಳು ತಿಳಿಸಿದ್ದಾರೆ. ಮೇ 2 ರ ನಂತರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿರುವುದರಿಂದ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.