ಈ ಭಾಗಗಳಲ್ಲಿ ಮುಂದಿನ 4 ದಿನ ರಣಕೋಟಿ ಮಳೆ: ಚಂಡಮಾರುತ ಸುಳಿಗೆ ಸಿಲುಕುವ ಭೀತಿ, ಎಲ್ಲೆಲ್ಲಿದೆ ಎಚ್ಚರಿಕೆ ಗಂಟೆ?
IMD Weather Alert of 14 September 2023: ಹವಾಮಾನ ಇಲಾಖೆಯ ಪ್ರಕಾರ, ಈ ಶನಿವಾರದವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೂ ಆಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
IMD Weather Alert of 14 September 2023: ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ನಾಲ್ಕು ದಿನಗಳ ಕಾಲ ಪಶ್ಚಿಮ ಬಂಗಾಳ, ಜಾರ್ಖಂಡ್, ದೆಹಲಿ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ವಿದರ್ಭ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಲಾಖೆಯ ಪ್ರಕಾರ ಒಡಿಶಾ, ಜಾರ್ಖಂಡ್, ಗಂಗಾನದಿ ಪಶ್ಚಿಮ ಬಂಗಾಳ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಶುಕ್ರವಾರದವರೆಗೆ ಸಾಧಾರಣ ಮಳೆಯಾಗಲಿದೆ. ಇದರೊಂದಿಗೆ ಚಂಡಮಾರುತ ಮತ್ತು ಸಿಡಿಲು ಸಹಿತ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಇದನ್ನೂ ಓದಿ: ಭರ್ಜರಿ ಇಳಿಕೆಯಾದ ಚಿನ್ನದ ಬೆಲೆ: ಸಾರ್ವಕಾಲಿಕ ದರ ಇಳಿಕೆಯಿಂದ 10 ಗ್ರಾಂ ಬಂಗಾರದ ರೇಟ್ ಎಷ್ಟಾಗಿದೆ
ಉತ್ತರಪ್ರದೇಶ-ಉತ್ತರಾಖಂಡದಲ್ಲಿ ಭಾರೀ ಮಳೆ:
ಹವಾಮಾನ ಇಲಾಖೆಯ ಪ್ರಕಾರ, ಈ ಶನಿವಾರದವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೂ ಆಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅಂತೆಯೇ, ಮಧ್ಯಪ್ರದೇಶ ಮತ್ತು ವಿದರ್ಭ ಪ್ರದೇಶದಲ್ಲಿ ಸೆಪ್ಟೆಂಬರ್ 16ರವರೆಗೆ ಭಾರೀ ಮಳೆಯ ಮುನ್ಸೂಚನೆ ಇದೆ. ಈ ರಾಜ್ಯಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇನ್ನು ಛತ್ತೀಸ್’ಗಢದಲ್ಲಿ ಶನಿವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇಂದು ದಕ್ಷಿಣ ಭಾರತದ ರಾಜ್ಯಗಳಾದ ಕೇರಳ, ಆಂಧ್ರಪ್ರದೇಶ ಮತ್ತು ತಮಿಳುನಾಡು ಘಟ್ಟ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದ ಘಾಟ್ ಪ್ರದೇಶಗಳಲ್ಲಿ ಶನಿವಾರದವರೆಗೆ ಭಾರೀ ಮಳೆಯಾಗುವ ಸೂಚನೆ ಇದೆ.
ಇದನ್ನೂ ಓದಿ: Horoscope: ಈ ರಾಶಿಗಿರಲಿದೆ ಮಹಾವಿಷ್ಣು ವಿಶೇಷ ಶ್ರೀರಕ್ಷೆ: ಇಂದು ಕೈತುಂಬಾ ದುಡ್ಡು, ಬಾಳು ಬಂಗಾರ
ಕರ್ನಾಟಕ ಹವಾಮಾನ ವರದಿ:
ರಾಜ್ಯದ ಹವಾಮಾನ ಪರಿಸ್ಥಿತಿ ನೋಡುವಿದಾದರೆ, ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದಾನೆ. ಉತ್ತಮ ರೀತಿಯಲ್ಲಿ ಮಳೆ ಬೀಳುತ್ತಿದ್ದು, ಈ ಭಾಗದ ರೈತರಿಗೆ ಸಂತಸ ತಂದಿದೆ. ಇನ್ನು ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ, ರಾಮನಗರ, ಚಾಮರಾಜನಗರದ ಕೊಳ್ಳೇಗಾಲದಲ್ಲಿ ಮುಂದಿನ ಕೆಲ ದಿನ ಉತ್ತಮ ಮಳೆ ಸುರಿಯಬಹುದು ಎಂದು ಹೇಳಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ, ಶಹಾಪುರ, ಯಾದಗಿರಿ ತಾಲೂಕುಗಳಲ್ಲಿ 32.1 ಮಿ.ಮೀ.ನಿಂದ 42 ಮಿ.ಮೀ.ವರೆಗೆ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ