Weather Update: ಈ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!
ಹವಾಮಾನ ಇಲಾಖೆ (IMD) ಸೆಪ್ಟೆಂಬರ್ 30ರವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಿದೆ.
ನವದೆಹಲಿ: ದೇಶದ ಗುಡ್ಡಗಾಡು ಪ್ರದೇಶಗಳಲ್ಲಿ ಹಿಮಪಾತ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪರ್ವತಗಳಲ್ಲಿ ಲಘು ಹಿಮಪಾತವು ಕಾಣಿಸಿಕೊಳ್ಳುತ್ತಿದೆ. ಮತ್ತೊಂದೆಡೆ ಮುಂಗಾರು ಕ್ಷೀಣಿಸಲು ಆರಂಭಿಸಿದೆ. ಇದರ ಹೊರತಾಗಿ ದೇಶದ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಜೋರಾಗಿ ಮಳೆಯಾಗುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆ (IMD) ಮುಂದಿನ 48 ಗಂಟೆಗಳ ಕಾಲ ಅಂದರೆ ಸೆಪ್ಟೆಂಬರ್ 30ರವರೆಗೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ.
ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ವಾಯುವ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಇದು ಅನೇಕ ರಾಜ್ಯಗಳ ಮೇಲೆ ಪರಿಣಾಮ ಬೀರುತ್ತಿದೆ. ಇದರ ಪ್ರಭಾವದಿಂದ ಆಂಧ್ರಪ್ರದೇಶದ ಕರಾವಳಿಯಲ್ಲಿ ಸೆಪ್ಟೆಂಬರ್ 30ರವರೆಗೆ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ. ಇಂದು ಅಂದರೆ ಸೆಪ್ಟೆಂಬರ್ 29ರಂದು ಒಡಿಶಾದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಓದಿ: ಸ್ಯಾನಿಟರಿ ಪ್ಯಾಡ್ ಜೊತೆಗೆ ಕಾಂಡೋಮ್ ಸಹ ಬೇಕೇ? ವಿದ್ಯಾರ್ಥಿನಿಗೆ ಐಎಎಸ್ ಅಧಿಕಾರಿ ಪ್ರಶ್ನೆ!
ಈಶಾನ್ಯ ಭಾರತದ ಹವಾಮಾನದ ಬಗ್ಗೆ ಹೇಳುವುದಾದರೆ, ಅಸ್ಸಾಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಮಳೆ ಸಾಧ್ಯತೆ ಇದೆ. ಅದರಂತೆ ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಸೆ.29ರಿಂದ 30ರವರೆಗೆ ಗುಡುಗು ಸಹಿತ ಸಾಧಾರಣ ಮತ್ತು ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಅಕ್ಟೋಬರ್ 1ರಿಂದ ಒಡಿಶಾದಲ್ಲಿ ಮಳೆ ಚಟುವಟಿಕೆಗಳು ಹೆಚ್ಚಾಗಲಿವೆ ಎಂದು IMD ಹೇಳುತ್ತದೆ.
ದೆಹಲಿಯಲ್ಲಿ ಮೋಡ ಕವಿದ ವಾತಾವರಣ
ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ ಕೆಲವು ದಿನಗಳವರೆಗೆ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ವಾಸ್ತವವಾಗಿ ಉತ್ತರ ಭಾರತದ ಬಯಲು ಪ್ರದೇಶದ ಮೇಲೆ ಮಾನ್ಸೂನ್ ಮಾರುತಗಳು ದುರ್ಬಲಗೊಳ್ಳಲು ಪ್ರಾರಂಭಿಸಿದ್ದು, ಇದೀಗ ಪಶ್ಚಿಮ ಒಣ ಮಾರುತಗಳು ಬೀಸಲಾರಂಭಿಸಿವೆ. ಮತ್ತೊಂದೆಡೆ ಬಿಹಾರ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕೇರಳ ರಾಜ್ಯಗಳುಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇದರೊಂದಿಗೆ ಈಶಾನ್ಯ ಭಾರತದ ಕೆಲ ಭಾಗಗಳಲ್ಲಿಯೂ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ: Airtel Payments Bank: ಹಳ್ಳಿಗಳಿಗೆ ಬರಲಿವೆ 1.5 ಲಕ್ಷ ಮೈಕ್ರೋ ಎಟಿಎಂಗಳು!
ಕರ್ನಾಟಕದಲ್ಲಿಯೂ ಮಳೆ ಸಾಧ್ಯತೆ
ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮತ್ತೆ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹೇಳಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.