Weather Update today: ನವದೆಹಲಿ : ದೇಶದ ಹಲವು ಭಾಗಗಳಲ್ಲಿ ಸೂರ್ಯ ನೆತ್ತಿ ಸುಡುತ್ತಿದ್ದಾನೆ.  ಮುಂದಿನ 4 ದಿನಗಳ ಕಾಲ ಇಡೀ ಉತ್ತರ ಮತ್ತು ಮಧ್ಯ ಭಾರತದಲ್ಲಿ ತೀವ್ರ ಶಾಖದ ಅಲೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಶುಕ್ರವಾರ ರಾಜಧಾನಿ ದೆಹಲಿಯಲ್ಲಿ ತೀವ್ರ ಶಾಖದ ಅಲೆ ಏಳಲಿದೆ.  ಗರಿಷ್ಠ ತಾಪಮಾನವು 44 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ. 


COMMERCIAL BREAK
SCROLL TO CONTINUE READING

ಆರೆಂಜ್ ಅಲರ್ಟ್ ನೀಡಿರುವ IMD : 
ಶುಕ್ರವಾರ ನೀಡಿರುವ ಮುನ್ಸೂಚನೆಯೊಂದಿಗೆ IMD ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. IMD ಪ್ರಕಾರ, ಶುಕ್ರವಾರ ದೆಹಲಿಯಲ್ಲಿ ಕನಿಷ್ಠ ತಾಪಮಾನವು 25.8 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದೆ. ಬೆಳಗ್ಗೆ 8.30ಕ್ಕೆ ಐಎಂಡಿ ಹೊರಡಿಸಿದ ಬುಲೆಟಿನ್ ಪ್ರಕಾರ, 'ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಜಮ್ಮು, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ, ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ  ಮತ್ತು ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಒಡಿಶಾದ ಪಶ್ಚಿಮ ಭಾಗಗಳಲ್ಲಿ   ಬಿಸಿ ಗಾಳಿ ಬೀಸಲಿದೆ. 


ಇದನ್ನೂ ಓದಿ : Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ, ಇಂದಿನ ದರ ಎಷ್ಟಿದೆ ನೋಡಿ


ಹವಾಮಾನ ಇಲಾಖೆಯ ಪ್ರಕಾರ, ಬೆಳಿಗ್ಗೆ 8.30 ರ ಹೊತ್ತಿಗೆ ಗಾಳಿಯಲ್ಲಿ ಆರ್ದ್ರತೆಯ ಮಟ್ಟವು ಶೇಕಡಾ 28 ರಷ್ಟಿತ್ತು. IMD ಪ್ರಕಾರ, ಬಯಲು ಪ್ರದೇಶದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 40 ಡಿಗ್ರಿ ಸೆಲ್ಸಿಯಸ್ ಅಥವಾ 4.5 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದ್ದರೆ ಬಿಸಿ ಗಾಳಿ ಎಂದು ಘೋಷಿಸಲಾಗುತ್ತದೆ. ತಾಪಮಾನವು ಸಾಮಾನ್ಯಕ್ಕಿಂತ 6.4 ಡಿಗ್ರಿಗಳಷ್ಟು ಹೆಚ್ಚಾದಾಗ 'ತೀವ್ರ ಶಾಖದ ಅಲೆ' ಎಂದು ಘೋಷಿಸಲಾಗುತ್ತದೆ.


12 ವರ್ಷಗಳ ದಾಖಲೆಯನ್ನು ಮುರಿದ ಬೇಸಿಗೆ : 
ದೆಹಲಿಯು ಗುರುವಾರ 43.5 ಡಿಗ್ರಿ ಸೆಲ್ಸಿಯಸ್‌ನ ಗರಿಷ್ಠ ತಾಪಮಾನದೊಂದಿಗೆ 12 ವರ್ಷಗಳಲ್ಲಿ ಏಪ್ರಿಲ್‌ನ ಅತ್ಯಂತ ಹೆಚ್ಚು ತಾಪಮಾನ ದಾಖಲಾಗಿದೆ.  18 ಏಪ್ರಿಲ್ 2010 ರಂದು ರಾಷ್ಟ್ರ ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 43.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. 


ಇದನ್ನೂ ಓದಿ : ಮಧ್ಯಪ್ರದೇಶದ ವಿಧಾನಸಭೆಯ ವಿಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಮಲ್ ನಾಥ್


ಮೇ 2ರ ನಂತರ ಮಳೆ ಸಾಧ್ಯತೆ  :
ಹಿರಿಯ ಹವಾಮಾನ ತಜ್ಞ ಆರ್.ಕೆ. ಫೆಬ್ರವರಿ 25 ರ ನಂತರ ದೆಹಲಿ-ಎನ್‌ಸಿಆರ್ ಮತ್ತು ಸಂಪೂರ್ಣ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ  ಗಮನಾರ್ಹ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮೇ 2 ರಂದು ಈ ಪ್ರದೇಶಗಳಲ್ಲಿ  ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. 


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.