ದೇಶದ ಕೆಲವು ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Yashaswini V
May 19,2023


ಮೇಘಾಲಯ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ರಾಜ್ಯಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.


ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು ಅಲ್ಲಲ್ಲಿ ತುಂತುರು ಮಲೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಮುಂದಿನ 24 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎನ್ನಲಾಗಿದೆ.


ಮೇ 22ರವರೆಗೆ ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ.


ಇದಲ್ಲದೆ ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚ


ದಕ್ಷಿಣ ಭಾರತದ ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ರಾಜ್ಯಗಳಲ್ಲೂ ಕೂಡ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.


ಇದಲ್ಲದೆ ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 21ರಂದು ಗುಡುಗು, ಮಿಂಚಿನಿಂದ ಕೂಡಿದ ಭಾರೀ ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಮಾಹಿತಿ ನೀಡಿದೆ.

VIEW ALL

Read Next Story