ಪ್ರಧಾನಿ ಮೋದಿ ಸರ್ಕಾರವು ಕೃಷಿ ಕ್ರಾಂತಿ ಮೂಲಕ ಅನ್ನದಾತರ ಸಬಲೀಕರಣ ಮಾಡುತ್ತಿದೆ.
ತಂತ್ರಜ್ಞಾನ ಮತ್ತು ನವೋದ್ಯಮದ ಮೂಲಕ ರೈತರ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
4 ಕೋಟಿ ರೈತರು ಪಿಎಂ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಪಡೆದುಕೊಂಡಿದ್ದಾರೆ.
11.8 ಕೋಟಿ ರೈತರು ಪಿಎಂ-ಕಿಸಾನ್ ಯೋಜನೆಯಡಿ ಪ್ರಯೋಜನ ಪಡೆದುಕೊಂಡಿದ್ದಾರೆ.
ಎಣ್ಣೆ ಬೀಜಗಳಲ್ಲಿ ಆತ್ಮನಿರ್ಭರತೆ ಸಾಧಿಸಲು ಕಾರ್ಯತಂತ್ರ ರೂಪಿಸಲಾಗುತ್ತಿದೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ಬೆಳೆಗಳ ಮೌಲ್ಯವರ್ಧನೆಗೆ ಹೆಚ್ಚಿನ ಪ್ರೋತ್ಸಾಹದ ಕ್ರಮ ಕೈಗೊಳ್ಳಲಾಗಿದೆ.
ಕೃಷಿ ಉತ್ಪನ್ನಗಳ ಸಂಸ್ಕೃರಣೆ, ಗ್ರೇಡಿಂಗ್ ಮತ್ತು ಬ್ರ್ಯಾಂಡಿಂಗ್ಗೆ ವಿಶೇಷ ಯೋಜನೆ ರೂಪಿಸಲಾಗಿದೆ.
ಕೃಷಿ & ರೈತ ಕಲ್ಯಾಣ ಸಚಿವಾಲಯಕ್ಕೆ 1.27 ಲಕ್ಷ ಕೋಟಿ ರೂ. ಅನುದಾನ ನೀಡಲಾಗಿದೆ.