West Bengal Assembly Election 2021: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಎಂಸಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಎರಡೂ ಪಕ್ಷಗಳ ನಾಯಕರು ಪರಸ್ಪರರ ಮೇಲೆ ದಾಳಿ ಪ್ರತಿದಾಳಿ ನಡೆಸುತ್ತಿದ್ದರೆ, ಮತ್ತೊಂದೆಡೆ ರಾಜಕೀಯ ಹಿಂಸಾಚಾರವೂ ತೀವ್ರಗೊಳ್ಳುತ್ತಿದೆ. 


COMMERCIAL BREAK
SCROLL TO CONTINUE READING

ರಾಜಕಾರಣಿಗಳು ಮತ್ತು ಕಾರ್ಮಿಕರ ಮೇಲಿನ ಹಿಂಸಾಚಾರದ ಇತ್ತೀಚಿನ ಸುದ್ದಿ ದಕ್ಷಿಣ 24 ಪರಗಣ ಜಿಲ್ಲೆಯ ರಾಂಪುರ್ ಗ್ರಾಮದಿಂದ ಬಂದಿದೆ. ಇಲ್ಲಿ ಶುಕ್ರವಾರ ತಡರಾತ್ರಿ ಬಾಂಬ್ ಸ್ಫೋಟದಲ್ಲಿ ಆರು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಈ ಘಟನೆಗೆ ತೃಣಮೂಲ ಕಾಂಗ್ರೆಸ್ (Trinamool Congress) ಕಾರಣ ಎಂದು ಬಿಜೆಪಿ ಆರೋಪ ಮಾಡಿದೆ.


Election Commission: ಪಂಚರಾಜ್ಯಗಳ ಚುನಾವಣೆ ದಿನಾಂಕ ಪ್ರಕಟ: ಇಲ್ಲಿದೆ ಫುಲ್ ಮಾಹಿತಿ!


ರಾಂಪುರ್ ಗ್ರಾಮದಲ್ಲಿ ಬಾಂಬ್ ಸ್ಫೋಟದಲ್ಲಿ ಆರು ಬಿಜೆಪಿ ಮುಖಂಡರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಗಾಯಗೊಂಡ ಬಿಜೆಪಿ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಎಲ್ಲಾ ಕಾರ್ಯಕರ್ತರು ವಿವಾಹ ಸಮಾರಂಭದಿಂದ ಹಿಂದಿರುಗುತ್ತಿದ್ದ ಸಮಯದಲ್ಲಿ, ಟಿಎಂಸಿ ಕಾರ್ಯಕರ್ತರು ಅವರ ಮೇಲೆ ಬಾಂಬ್ ಎಸೆದರು ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ - Amit Shah: 'ಯುವಕರು ನಮಗೆ ಮತ ನೀಡಿದ್ರೆ ನಿರುದ್ಯೋಗವನ್ನು ಶೇ.40ಕ್ಕಿಂತ ಕಡಿಮೆ ಮಾಡುತ್ತೇವೆ'


ಈ ಮಧ್ಯೆ ಫೆಬ್ರವರಿ 12 ರಂದು ಟಿಎಂಸಿಗೆ ರಾಜೀನಾಮೆ ನೀಡಿದ್ದ ಸಿಎಂ ಮಮತಾ ಬ್ಯಾನರ್ಜಿ (Mamata Banerjee)  ಅವರ ಆಪ್ತ ಮಾಜಿ ಕೇಂದ್ರ ಸಚಿವ ದಿನೇಶ್ ತ್ರಿವೇದಿ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಬಿಜೆಪಿಯ ದಿನೇಶ್ ತ್ರಿವೇದಿ ಪಕ್ಷದ ಸದಸ್ಯತ್ವವನ್ನು ನೀಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.