West Bengal Assembly Election 2021: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2021 ರ ಪ್ರಚಾರಕ್ಕಾಗಿ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿರುವ ಸ್ಟಾರ್ ಪ್ರಚಾರಕರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ,  ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ,  ರಕ್ಷಣಾ ಸಚಿವರಾದ ರಾಜನಾಥ ಸಿಂಗ್, ನಿತಿನ್ ಗಡ್ಕರಿ ಸೇರಿದ್ದಾರೆ.


COMMERCIAL BREAK
SCROLL TO CONTINUE READING

ಅಷ್ಟೇ ಅಲ್ಲದೆ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡ ಖ್ಯಾತ ನಟ ಮಿಥುನ್ ಚಕ್ರವರ್ತಿ(Mithun Chakraborty) , ಪಾಯಲ್ ಸರ್ಕಾರ್, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಅಮಿತ್ ಮಾಲ್ವಿಯಾ ಅವರ ಹೆಸರನ್ನು ಈ ಪಟ್ಟಿ ಒಳಗೊಂಡಿದೆ.


ಇದನ್ನೂ ಓದಿ - Uttarakhand ನೂತನ ಸಿಎಂ ಆಗಿ ತಿರತ್ ಸಿಂಗ್ ರಾವತ್ ಆಯ್ಕೆ


ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಇಲ್ಲಿದೆ:


ಕೇರಳ ಚುನಾವಣೆಗೂ ಮುನ್ನ ಕಾಂಗ್ರೆಸ್ ತೊರೆದ ಪಿ.ಸಿ.ಚಾಕೋ


ಪಶ್ಚಿಮ ಬಂಗಾಳದ 294 ಸದಸ್ಯರ ವಿಧಾನಸಭೆಯ ಚುನಾವಣೆ (Assembly Election 2021) ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ನಡೆಯಲಿದೆ. ಮೇ 2 ರಂದು ಮತಗಳನ್ನು ಎಣಿಕೆ ನಡೆಯಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.