ಕೋಲ್ಕತ್ತಾ: ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 


COMMERCIAL BREAK
SCROLL TO CONTINUE READING

ಹೌದು, ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ(Suvendu Adhikari) ಹೀನಾಯ ಸೋಲು ಅನುಭವಿಸಿದ್ದಾರೆ.


ಇದನ್ನೂ ಓದಿ : TMC ಭರ್ಜರಿ ಗೆಲುವಿಗೆ ದೀದಿಗೆ ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್


ಬಿಜೆಪಿಯ ಸುವೇಂದು ಅಧಿಕಾರಿ ಹಾಗೂ ಮಮತಾ ಬ್ಯಾನರ್ಜಿ(Mamata Banerjee) ನಡುವೆ ನಂದಿಗ್ರಾಮ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲದ ಹಣಾಹಣಿ ನಡೆದಿತ್ತು. ಇಂತಹ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಸುವೇಂಧು ಅಧಿಕಾರಿಗೆ ಮಣ್ಣು ಮುಕ್ಕಿಸಿರುವಂತ ದೀದಿ, ಕೊನೆಗೂ 1200 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮತ್ತೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಗದ್ದುಗೆಯನ್ನು ಏರಲಿದ್ದಾರೆ.


West Bengal Election Result 2021: ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ನ ಶಾಕಿಂಗ್ ಹೇಳಿಕೆ...!


ಬಂಗಾಳದಲ್ಲಿ 294 ಕ್ಷೇತ್ರಗಳಿಗೆ 8 ಸುತ್ತಿಗಳಲ್ಲಿ ಮತದಾನ(Voting) ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು ಟಿಎಂಸಿ ಬರೋಬ್ಬರಿ 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ತೀವ್ರ ಪ್ರಚಾರ ನಡೆಸಿದ್ದ ಬಿಜೆಪಿ ಕೇವಲ 80 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 


ಇದನ್ನೂ ಓದಿ : Coronavirusನಿಂದ ಬಿಗಡಾಯಿಸುತ್ತಿರುವ ಪರಿಸ್ಥಿತಿ, ಪ್ರಧಾನಿ ಮೋದಿಯಿಂದ ಮಹತ್ವದ ಸಭೆ


ಪಶ್ಚಿಮ ಬಂಗಾಳದಲ್ಲಿ ಟಿಎಂಸಿ(TMC) ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.