West Bengal elections 2021: ಪ. ಬಂಗಾಳ ಎಲೆಕ್ಷನ್: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ!

ಕಲ್ಕತ್ತದಲ್ಲಿ ನಡೆದ ಸಮಾರಂಭದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ

Last Updated : Mar 21, 2021, 07:12 PM IST
  • ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಯುಕ್ತ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ
  • 'ಬಂಗಾರದ ಬಂಗಾಳ' ಮಾಡುತ್ತೇವೆ ಎಂದು ಹೇಳಿದೆ.
  • ಕಲ್ಕತ್ತದಲ್ಲಿ ನಡೆದ ಸಮಾರಂಭದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ
West Bengal elections 2021: ಪ. ಬಂಗಾಳ ಎಲೆಕ್ಷನ್: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ! title=

ಕಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಯುಕ್ತ ಬಿಜೆಪಿ ಇಂದು ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, 'ಬಂಗಾರದ ಬಂಗಾಳ' ಮಾಡುತ್ತೇವೆ ಎಂದು ಹೇಳಿದೆ.

ಕಲ್ಕತ್ತದಲ್ಲಿ ನಡೆದ ಸಮಾರಂಭದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ(Amit Shah) ಅವರು, ಇದು ಕೇವಲ ಪ್ರಣಾಳಿಕೆ ಅಲ್ಲ. ಬಂಗಾಳದ ಅಭಿವೃದ್ಧಿಗೆ ದೇಶದ ಅತಿದೊಡ್ಡ ಪಕ್ಷ ಕೈಗೊಂಡಿರುವ ಸಂಕಲ್ಪ ಪತ್ರ ಎಂದು ಹೇಳಿದರು.

ರೈಲ್ವೆಯಲ್ಲಿ ಮಹಿಳೆ ವಿರುದ್ಧದ ಕ್ರೈಂ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಪಶ್ಚಿಮ ಬಂಗಾಳ(West Bengal) ಸರ್ಕಾರಿ ನೌಕರಿಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವುದು ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶವಾಗಿದೆ. ನುಸುಳುಕೋರರನ್ನು ತಡೆಗಟ್ಟಲು ಅತ್ಯಂತ ಪರಿಣಾಮಕಾರಿ ಕ್ರಮ ತೆಗೆದುಕೊಳ್ಳಲಾಗುವುದು, ರೈತ ಸಮ್ಮಾನ್ ಕಾರ್ಯಕ್ರಮದ ಭಾಗವಾಗಿ ಪ್ರತಿ ವರ್ಷ 6 ಸಾವಿರ ರೂಪಾಯಿ ರೈತರ ಖಾತೆಗೆ, ಹಿಂದಿನ ಮೂರು ವರ್ಷದ ಅವಧಿಯಲ್ಲಿ ಟಿಎಂಸಿ ನೀಡದ 6 ಸಾವಿರ ರೂಪಾಯಿಯನ್ನು ಸೇರಿ ಮುಂದಿನ ವರ್ಷ 18 ಸಾವಿರ ರೂ ಖಾತೆಗೆ ಹಾಕಲಾಗುವುದು ಎಂದು ಅಮಿತ್ ಶಾ ಹೇಳಿದ್ದಾರೆ.

Param Bir Sing Letter Controversy- ರಾಜೀನಾಮೆ ನೀಡುತ್ತಾರೆಯೇ ಅನಿಲ್ ದೇಶ್ಮುಖ್? ಶರದ್ ಪವಾರ್ ಹೇಳಿದ್ದೇನು?

ನಿರ್ಗತಿಕ ಕುಟುಂಬಗಳಿಗೆ ವರ್ಷಕ್ಕೆ 10 ಸಾವಿರ ರೂಪಾಯಿ ನೀಡಲಾಗುವುದು, ಬಂಗಾಳಿ ಬಾಷೆಯನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಲಾಗುವುದು, ಪಿಜಿ ವರೆಗೆ ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಅನೇಕ ಯೋಜನೆಗಳನ್ನು ಪ್ರಣಾಳಿಕೆ(Election Manifesto)ಯಲ್ಲಿ ಬಿಜೆಪಿ ಘೋಷಣೆ ಮಾಡಿದೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾಗೆ ಕೊರೊನಾ ಧೃಢ, ಏಮ್ಸ್ ಗೆ ದಾಖಲು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News