ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಮಾಣಿಕ್ ಭಟ್ಟಾಚಾರ್ಯರನ್ನು ಜಾರಿ ನಿರ್ದೇಶನಾಲಯ ಮೊನ್ನೆಯಷ್ಟೇ ಬಂಧಿಸಿತ್ತು. ಈ ಹಗರಣದಲ್ಲಿ ಹಲವಾರು ಉನ್ನತ ವ್ಯಕ್ತಿಗಳು ಭಾಗಿಯಾಗಿರುವ ಕುರಿತು ಹಲವಾರು ದೋಷಾರೋಪಣೆ ದಾಖಲೆಗಳು ಮತ್ತು ಡಿಜಿಟಲ್ ಪುರಾವೆಗಳನ್ನು ಇಡಿ ಸಂಗ್ರಹಿಸಿದೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ವರದಿಗಳ ಪ್ರಕಾರ ಕೇಂದ್ರ ಹಣಕಾಸು ತನಿಖಾ ಸಂಸ್ಥೆಯು ಹಲವಾರು ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆಯನ್ನು ಸೂಚಿಸುವ ಪತ್ರವನ್ನು ವಶಪಡಿಸಿಕೊಂಡಿದೆ. ಇದಲ್ಲದೆ ಸಿಎಂ ಮಮತಾ ಬ್ಯಾನರ್ಜಿ ಹೆಸರು ಉಲ್ಲೇಖವಿರುವ ಸಿಡಿಯನ್ನು ಸಹ ವಶಕ್ಕೆ ತೆಗೆದುಕೊಂಡಿದೆಯಂತೆ. ಇವೆಲ್ಲವೂ ನೇಮಕಾತಿ ಹಗರಣದಲ್ಲಿ ಹಲವರಿಂದ ದೊಡ್ಡ ಮೊತ್ತದ ಹಣ ತೆಗೆದುಕೊಂಡು ವಂಚನೆ ನಡೆಸಲಾಗಿದೆ ಎಂಬ ಅಂಶವನ್ನು ಸೂಚಿಸುತ್ತದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: ಭ್ರಷ್ಟಾಚಾರದಿಂದಾಗಿ ಮಾನವ ಹಕ್ಕುಗಳು 'ರಾಜಿಯಾಗುತ್ತವೆ'-ಉಪರಾಷ್ಟ್ರಪತಿ


ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದ ಇತರ ಪ್ರಮುಖ ಸಾಕ್ಷ್ಯಗಳ ಜೊತೆಗೆ ರಾಜ್ಯದ ಪ್ರಾಥಮಿಕ ಶಿಕ್ಷಕರ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳ ಹೆಸರು ಮತ್ತು ರೋಲ್ ಸಂಖ್ಯೆಗಳನ್ನು ಒಳಗೊಂಡಿರುವ ಸಿಡಿಯನ್ನು ಕೇಂದ್ರ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ಮೂಲಗಳ ಪ್ರಕಾರ, 44 ಆಕಾಂಕ್ಷಿಗಳು ಉದ್ಯೋಗಕ್ಕಾಗಿ ಪ್ರತಿಯಾಗಿ ತಲಾ 7 ಲಕ್ಷ ರೂ. ಪಾವತಿಸಿದ್ದಾರೆ ಮತ್ತು ಈ ಮೊತ್ತವನ್ನು ಟಿಎಂಸಿ ಕಚೇರಿ ಅಧಿಕಾರಿಯೊಬ್ಬರು ಸಂಗ್ರಹಿಸಿದ್ದಾರೆ ಎಂದು ದೃಢೀಕರಿಸುವ ಪತ್ರವನ್ನು ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ತಿಳಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.


ಬಹುಕೋಟಿ ಡಬ್ಲ್ಯುಬಿಎಸ್‌ಎಸ್‌ಸಿ ನೇಮಕಾತಿ ಅಕ್ರಮಗಳ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಶಾಸಕ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿ (ಡಬ್ಲ್ಯುಬಿಬಿಪಿಇ) ಮಾಜಿ ಅಧ್ಯಕ್ಷ ಮಾಣಿಕ್ ಭಟ್ಟಾಚಾರ್ಯ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದ್ದರು. ಕಳೆದ ತಿಂಗಳು ವಿಶೇಷ ಪಿಎಂಎಲ್‌ಎ ನ್ಯಾಯಾಲಯದ ಮುಂದೆ ಸಲ್ಲಿಸಿದ ತನ್ನ ಮೊದಲ ಆರೋಪಪಟ್ಟಿಯಲ್ಲಿ ಇಡಿ ಮಾಣಿಕ್ ಭಟ್ಟಾಚಾರ್ಯರನ್ನು ಹೆಸರಿಸಿತ್ತು. ನೇಮಕಾತಿ ಅಕ್ರಮ ಹಗರಣದಲ್ಲಿ ಅವರು ಹೇಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂಬುದರ ಕುರಿತು ಕೆಲವು ನಿರ್ಣಾಯಕ ವಿವರಗಳನ್ನು ಈ ವೇಳೆ ಉಲ್ಲೇಖಿಸಿತ್ತು.


ತನ್ನ ಚಾರ್ಜ್‌ಶೀಟ್‌ನಲ್ಲಿ ಭಟ್ಟಾಚಾರ್ಯ ಮತ್ತು ಮಾಜಿ ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ನಡುವಿನ ಕೆಲವು ದೂರವಾಣಿ ಸಂವಹನ ನಡೆದಿರುವ ಬಗ್ಗೆ ಸಂಸ್ಥೆ ಉಲ್ಲೇಖಿಸಿದೆ. ಇದು ಹಗರಣದಲ್ಲಿ ಮಾಜಿ ಡಬ್ಲ್ಯುಬಿಬಿಪಿಇ ಅಧ್ಯಕ್ಷರು ಭಾಗಿಯಾಗಿರುವ ಬಗ್ಗೆ ಸ್ಪಷ್ಟ ಸುಳಿವು ನೀಡಿದೆ. ಪ್ರಕರಣದಲ್ಲಿ ಪಾರ್ಥ ಚಟರ್ಜಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ನೇಮಕಾತಿ ಪ್ರಕ್ರಿಯೆಯಲ್ಲಿ ಅನರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಡೆದಿರುವ ದೊಡ್ಡ ಮಟ್ಟದ ಹಗರಣದಲ್ಲಿ ಭಟ್ಟಾಚಾರ್ಯ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಇಡಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ: Mallikarjun Kharge : 'ಬಕ್ರೀದ್‌ನಲ್ಲಿ ಬದುಕಿದರೆ ಮೊಹರಂನಲ್ಲಿ ಕುಣಿಯಬಹುದು'


‘ರಾಜ್ಯದಲ್ಲಿ ಪದವಿ ಶಿಕ್ಷಣ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವ್ಯಕ್ತಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡುವುದು ಸೇರಿದಂತೆ ಹಲವು ಆರೋಪಗಳು ಪಾರ್ಥ ಚಟರ್ಜಿ ಮೇಲಿವೆ. ವಿವಿಧ ರಾಜ್ಯಗಳಲ್ಲಿ ಪ್ರಾಥಮಿಕ ಶಿಕ್ಷಕರ ನೇಮಕಾತಿಗಾಗಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿಯೂ ಅವರು ಭಾರೀ ಅಕ್ರಮಗಳಲ್ಲಿ ತೊಡಗಿದ್ದಾರೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕೆಲವು ದೋಷಗಳು ಪತ್ತೆಯಾದ ನಂತರ ಅವರು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳ ಅಂಕಗಳನ್ನು ಆಯ್ದು ಹೆಚ್ಚಿಸಿದ್ದಾರೆ ಎಂದು ಆರೋಪಿಸಲಾಗಿದೆ.


 ಇಡಿ ಕ್ರಮವನ್ನು ಬಿಜೆಪಿ ಸ್ವಾಗತಿಸಿದ್ದು, ಕೇಂದ್ರ ಏಜೆನ್ಸಿಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ ಎಂದಿದೆ. ಪ್ರಕರಣದಲ್ಲಿ ದೊಡ್ಡ ದೊಡ್ಡ ತಿಮಿಂಗಲುಗಳು ಬಲೆಗೆ ಬೀಳುತ್ತಿವೆ ಎಂದು ಹೇಳಿದೆ. ಮಾಣಿಕ್ ಭಟ್ಟಾಚಾರ್ಯ ಬಂಧನ ಅನಿವಾರ್ಯವಾಗಿತ್ತು ಎಂದು ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ ಹೇಳಿದ್ದಾರೆ. ‘ಅವರು ಹಲವಾರು ತಂತ್ರಗಳ ಮೂಲಕ ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು, ಆದರೆ ಅಂತಿಮವಾಗಿ ಇಡಿ ಅಧಿಕಾರಿಗಲು ಅವರನ್ನು ಬಂಧಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.