ಏನಿದು ನ್ಯಾಷನಲ್ ಮೆಡಿಕಲ್ ಕಮಿಷನ್(NMC)?

ನೀತಿ ಆಯೋಗದ ಶಿಫಾರಸ್ಸಿನ ಮೇರೆಗೆ ನ್ಯಾಷನಲ್ ಮೆಡಿಕಲ್ ಕಮಿಷನ್ ತರಲು ಕೇಂದ್ರ ಸರ್ಕಾರ ಸಿದ್ದತೆ.
ನವ ದೆಹಲಿ: ರಾಷ್ಟ್ರೀಯ ವೈದ್ಯಕೀಯ ಸಂಘದ ನಿರ್ದೇಶನದ ಮೇರೆಗೆ ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಎನ್ಎಂಸಿ ಮಸೂದೆಯನ್ನು ವಿರೋಧಿಸಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೇಶಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ತಪಾಸಣೆಯನ್ನು ಬಂದ್ ಮಾಡಲಾಗಿದೆ. ಹಾಗಾದರೇ ಈ ನ್ಯಾಷನಲ್ ಮೆಡಿಕಲ್ ಕಮಿಷನ್(NMC) ಎಂದರೆ ಏನು? ಇದರಿಂದಾಗುವ ಅನಾನುಕೂಲಗಳೇನು? ಈ ಬಗ್ಗೆ ನವ ದೆಹಲಿಯಲ್ಲಿ ನಮ್ಮ ಝೀ ನ್ಯೂಸ್ ನೊಂದಿಗೆ ಮಾತನಾಡಿರುವ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಡಾ. ಎಚ್. ಎಲ್. ರವೀಂದ್ರ ಮಾಹಿತಿ ನೀಡಿದ್ದಾರೆ. ಅದನ್ನು ನೀವೇ ನೋಡಿ...