ನವದೆಹಲಿ : ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashant Kishor) ಶುಕ್ರವಾರ ಕಾಂಗ್ರೆಸ್ (Congress) ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ತಕ್ಷಣದ ಪರಿಹಾರವಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಲಖಿಂಪುರ್ ಖೇರಿ ಪ್ರಕರಣದಲ್ಲಿ ವಿರೋಧ ಪಕ್ಷಗಳ ಮೇಲೆ ನಿರೀಕ್ಷೆ ಇಟ್ಟುಕೊಂಡಿರುವವರಿಗೆ ನಿರಾಸೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. 


COMMERCIAL BREAK
SCROLL TO CONTINUE READING

'ಕಾಂಗ್ರೆಸ್‌ನಿಂದ ನಿರೀಕ್ಷೆ ಇಟ್ಟುಕೊಂಡಿರುವವರಿಗೆ ನಿರಾಸೆಯಾಗುತ್ತಿದೆ : 
"ಲಖಿಂಪುರ್ ಖೇರಿ ಘಟನೆಯ ಹಿನ್ನೆಲೆಯಲ್ಲಿ ದೇಶದ ಅತ್ಯಂತ ಹಳೆಯ ಪಕ್ಷ ಮತ್ತು ವಿರೋಧ ಪಕ್ಷದಿಂದ ಸಾಮಾನ್ಯವಾಗಿ ಜನರು ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಈ ಸಂದರ್ಭದಲ್ಲಿ ಜನರು ನಿರಾಸೆಗೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಪ್ರಶಾಂತ್ ಕಿಶೋರ್ (Prashant Kishor) ಹೇಳಿದ್ದಾರೆ. ಆದರೆ ದುರದೃಷ್ಟವಶಾತ್, ಹಳೆಯ ಪಕ್ಷವನ್ನು ದೀರ್ಘಕಾಲದಿಂದ ಕಾಡುತ್ತಿರುವ ಸಮಸ್ಯೆಗಳಿಗೆ ಮತ್ತು ರಚನಾತ್ಮಕ ದೋಷಗಳಿಗೆ ತ್ವರಿತ ಪರಿಹಾರವಿಲ್ಲ ಎಂದವರು ಹೇಳಿದ್ದಾರೆ.


AIR INDIA SALE: 68 ವರ್ಷಗಳ ನಂತರ ಮತ್ತೆ ಟಾಟಾಗೆ ಮರಳಿದ ಏರ್ ಇಂಡಿಯಾ..!


ಕೆಲವು ವಾರಗಳ ಹಿಂದೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್ (Congress) ಸೇರುವ ಬಗ್ಗೆ ಮಾತು ಕೇಳಿ ಬಂದಿತ್ತು. ಆದರೆ  ಪ್ರಶಾಂತ್ ಕಿಶೋರ್‌ ಅವರ ಈ ಹೇಳಿಕೆ ನೋಡಿದರೆ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆಗಳು ತೀರಾ ಕಡಿಮೆ ಎಂಬಂತೆ ತೋರುತ್ತದೆ.  


'ಸಾರ್ವಜನಿಕರು ಯಾರನ್ನು ಬಯಸುತ್ತಾರೋ ಅವರು ರಾಜಕೀಯದಲ್ಲಿ ಮುಂದುವರಿಯುತ್ತಾರೆ':
ರಾಜಕೀಯದಲ್ಲಿ ಸಾರ್ವಜನಿಕರು ಯಾರನ್ನು ಬಯಸುತ್ತಾರೆಯೋ ಅವರು ರಾಜಕೀಯದಲ್ಲಿ ಮುಂದುವರೆಯುತ್ತಾರೆ. ಸದ್ಯದ ಪರಿಸ್ಥಿತಿಯಲ್ಲಿ ರಾಹುಲ್ ಗಾಂಧಿ (Rahul Gandhi) ಮತ್ತು ಪ್ರಿಯಾಂಕಾ ಗಾಂಧಿ (Priyanka Gandhi) ಜನರ ಪರವಾಗಿ ಹೋರಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ.


ಇದನ್ನೂ ಓದಿ : Intelligence Alert: ISI ಹಾಗೂ ಉಗ್ರ ಸಂಚಿನ ಮಹತ್ವದ ಮಾಹಿತಿ ಬಹಿರಂಗ, ಇಲ್ಲಿವೆ ಭಾರತದ ವಿರುದ್ಧ ರಚಿಸಲಾದ 5 ಮಾಸ್ಟರ್ ಪ್ಲಾನ್


ಲಖಿಂಪುರ್ ಖೇರಿಗೆ 'ರಾಹುಲ್-ಪ್ರಿಯಾಂಕಾ ಭೇಟಿ :
ಲಖಿಂಪುರ್ ಖೇರಿ ಹಿಂಸಾಚಾರದಲ್ಲಿ (Lakhimpur Kheri Violence) ಪ್ರತಿಭಟನಾ ನಿರತ ರೈತರು ಸಾವನ್ನಪ್ಪಿದ ನಂತರ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಥಳಕ್ಕೆ ಭೇಟಿ ನೀಡುತ್ತಿದ್ದ ವೇಳೆ, ಅವರನ್ನು ಬಂಧಿಸಲಾಯಿತು. ಎರಡು ದಿನಗಳ ಕಾಲ ಅವರನ್ನು ಪೊಲೀಸ್ (Police) ಕಸ್ಟಡಿಯಲ್ಲಿ ಇರಿಸಲಾಗಿತ್ತು. ಇದಾದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ