ಭಾರತದಲ್ಲಿ 16 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದ ವಾಟ್ಸಪ್

ಹೊಸ ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ 16.6 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಪ್ ಬುಧವಾರ ಹೇಳಿದೆ.ಈ ಹಿಂದೆ ಮಾರ್ಚ್ನಲ್ಲಿ ಅದು ದೇಶದಲ್ಲಿ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿತ್ತು.

Written by - Zee Kannada News Desk | Last Updated : Jun 1, 2022, 08:42 PM IST
  • ಹೊಸ ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ 16.6 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಪ್ ಬುಧವಾರ ಹೇಳಿದೆ.
  • ಈ ಹಿಂದೆ ಮಾರ್ಚ್ನಲ್ಲಿ ಅದು ದೇಶದಲ್ಲಿ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿತ್ತು.
ಭಾರತದಲ್ಲಿ 16 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದ ವಾಟ್ಸಪ್ title=
file photo

ನವದೆಹಲಿ: ಹೊಸ ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ 16.6 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಪ್ ಬುಧವಾರ ಹೇಳಿದೆ.ಈ ಹಿಂದೆ ಮಾರ್ಚ್ನಲ್ಲಿ ಅದು ದೇಶದಲ್ಲಿ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿತ್ತು.

ಹೊಸ ಐಟಿ ನಿಯಮಗಳು 2021ರ ಅಡಿಯಲ್ಲಿ, 5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿರುವ ದೊಡ್ಡ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಮಾಸಿಕ ವರದಿಗಳನ್ನು ಪ್ರಕಟಿಸಬೇಕು.ಹಾಗಾಗಿ ಅದರ ಅನುಗುಣವಾಗಿ ಈಗ ವಾಟ್ಸಪ್ ವರದಿಗಳನ್ನು ಪ್ರಕಟಿಸುತ್ತಿದೆ.

ಕಂಪನಿಯು ಏಪ್ರಿಲ್‌ನಲ್ಲಿ ದೇಶದೊಳಗೆ 844 ಕುಂದುಕೊರತೆ ವರದಿಗಳನ್ನು ಸ್ವೀಕರಿಸಿದೆ ಮತ್ತು ಅದರಲ್ಲಿ 123 ಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ.ಮಾರ್ಚ್‌ನಲ್ಲಿ, 597 ಕುಂದು ಕೊರತೆ ವರದಿಗಳನ್ನು ಸ್ವೀಕರಿಸಿತ್ತು, ಅದರಲ್ಲಿ 74 ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.

ಬಳಕೆದಾರ-ಸುರಕ್ಷತಾ ವರದಿಯು ಸ್ವೀಕರಿಸಿದ ಬಳಕೆದಾರರ ದೂರುಗಳು ಮತ್ತು ವಾಟ್ಸಪ್ ನಿಂದ ತೆಗೆದುಕೊಂಡ ಕ್ರಮಗಳ ವಿವರಗಳನ್ನು ಒಳಗೊಂಡಿದೆ, ಹಾಗೆಯೇ ವಾಟ್ಸಪ್ ಪ್ಲಾಟ್‌ಫಾರ್ಮ್‌ನಲ್ಲಿ ನಿಂದನೆಯನ್ನು ಎದುರಿಸಲು ಇದುವರೆಗೂ ಸ್ವಂತ ತಡೆಗಟ್ಟುವ ಕ್ರಮಗಳನ್ನು ಒಳಗೊಂಡಿದೆ.ಇತ್ತೀಚಿಗಿನ ಏಪ್ರಿಲ್ ತಿಂಗಳಲ್ಲಿ ಪ್ರಕಟವಾದ ವರದಿಯಲ್ಲಿ ವಾಟ್ಸಪ್ 1.6 ಮಿಲಿಯನ್‌ಗಿಂತಲೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ ಎಂದು ಕಂಪನಿಯ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Trending News