ಭಾರತದಲ್ಲಿ 16 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದ ವಾಟ್ಸಪ್
ಹೊಸ ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ 16.6 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಪ್ ಬುಧವಾರ ಹೇಳಿದೆ.ಈ ಹಿಂದೆ ಮಾರ್ಚ್ನಲ್ಲಿ ಅದು ದೇಶದಲ್ಲಿ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿತ್ತು.
ನವದೆಹಲಿ: ಹೊಸ ಐಟಿ ನಿಯಮಗಳು 2021 ರ ಅನುಸಾರವಾಗಿ ಏಪ್ರಿಲ್ ತಿಂಗಳಲ್ಲಿ ಭಾರತದಲ್ಲಿ 16.6 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ವಾಟ್ಸಪ್ ಬುಧವಾರ ಹೇಳಿದೆ.ಈ ಹಿಂದೆ ಮಾರ್ಚ್ನಲ್ಲಿ ಅದು ದೇಶದಲ್ಲಿ 18 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿತ್ತು.
ಹೊಸ ಐಟಿ ನಿಯಮಗಳು 2021ರ ಅಡಿಯಲ್ಲಿ, 5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರನ್ನು ಹೊಂದಿರುವ ದೊಡ್ಡ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಮಾಸಿಕ ವರದಿಗಳನ್ನು ಪ್ರಕಟಿಸಬೇಕು.ಹಾಗಾಗಿ ಅದರ ಅನುಗುಣವಾಗಿ ಈಗ ವಾಟ್ಸಪ್ ವರದಿಗಳನ್ನು ಪ್ರಕಟಿಸುತ್ತಿದೆ.
ಕಂಪನಿಯು ಏಪ್ರಿಲ್‌ನಲ್ಲಿ ದೇಶದೊಳಗೆ 844 ಕುಂದುಕೊರತೆ ವರದಿಗಳನ್ನು ಸ್ವೀಕರಿಸಿದೆ ಮತ್ತು ಅದರಲ್ಲಿ 123 ಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ.ಮಾರ್ಚ್‌ನಲ್ಲಿ, 597 ಕುಂದು ಕೊರತೆ ವರದಿಗಳನ್ನು ಸ್ವೀಕರಿಸಿತ್ತು, ಅದರಲ್ಲಿ 74 ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ