ಟ್ವಿಟ್ಟರ್'ನಲ್ಲಿ ಗೆಹ್ಲೋಟ್-ಪೈಲಟ್ ಜತೆಗಿನ ಫೋಟೋ ಪೋಸ್ಟ್ ಮಾಡಿದ ರಾಹುಲ್

ಮೂಲಗಳ ಪ್ರಕಾರ, ಅಶೋಕ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲು ಸಚಿನ್ ಪೈಲಟ್ ಸಹಮತವಿಲ್ಲ ಎಂದು ತಿಳಿದುಬಂದಿದ್ದು, ಸಚಿನ್ ಪಕ್ಷದ ಮುಖಂಡರೊಂದಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Last Updated : Dec 14, 2018, 03:58 PM IST
ಟ್ವಿಟ್ಟರ್'ನಲ್ಲಿ ಗೆಹ್ಲೋಟ್-ಪೈಲಟ್ ಜತೆಗಿನ ಫೋಟೋ ಪೋಸ್ಟ್ ಮಾಡಿದ ರಾಹುಲ್ title=

ನವದೆಹಲಿ: ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೆಲವೇ ಕ್ಷಣಗಳಲ್ಲಿ ತೆರೆ ಬೀಳುವ ಸಾಧ್ಯತೆ ಇದೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜಸ್ಥಾನ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಮೇಲ್ವಿಚಾರಕ ಕೆ.ಸಿ. ವೇಣುಗೋಪಾಲ್, ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ಅವರೊಂದಿಗೆ ಸಭೆ ನಡೆಸಿದರು. ಸಭೆಯ ಬಳಿಕ ರಾಹುಲ್ ಗಾಂಧಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರೊಂದಿಗಿನ ಫೋಟೋವನ್ನು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು  'ಯುನೈಟೆಡ್ ಕಲರ್ಸ್ ಆಫ್ ರಾಜಸ್ಥಾನ' ಎಂದು ಬರೆದಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸಿದ್ಧತೆಗಳು ಪ್ರಾರಂಭವಾಗಿವೆ. ಸ್ವಲ್ಪ ಸಮಯದಲ್ಲೇ ಗೆಹ್ಲೋಟ್ ಜೈಪುರ ತಲುಪಲಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ, ಸಂಜೆ 04:30 ರಾಜಸ್ಥಾನ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಾಗುವುದು. ಡಿಸೆಂಬರ್ 17 ರಂದು ಮುಖ್ಯಮಂತ್ರಿ ಶಪಥ ಸಮಾರಂಭ ನಡೆಯಲಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಅಶೋಕ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡಲು ಸಚಿನ್ ಪೈಲಟ್ ಸಹಮತವಿಲ್ಲ ಎಂದು ತಿಳಿದುಬಂದಿದ್ದು, ಸಚಿನ್ ಪಕ್ಷದ ಮುಖಂಡರೊಂದಿಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿನ್ ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ ಎಂಬ ಮಾಹಿತಿಯನ್ನೂ ಕೂಡ ಮೂಲಗಳು ತಿಳಿಸಿವೆ.

Trending News