"ನೀವು ಸರಿಯಾದ ಜಾಗದಲ್ಲಿ ಕುಂತಿದ್ದಿರಿ" ಅಜಿತ್ ಪವಾರ್ ಗೆ ಅಮಿತ್ ಶಾ ಹೀಗೆ ಹೇಳಿದ್ದೇಕೆ?

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ವೇದಿಕೆ ಹಂಚಿಕೊಂಡಿದ್ದರು.

Written by - Manjunath N | Last Updated : Aug 6, 2023, 08:00 PM IST
  • ಸಹಕಾರಿ ಸಂಘಗಳಿಗೆ ವಿವಿಧ ಯೋಜನೆಗಳಡಿಯಲ್ಲಿ ಬೃಹತ್ ಧನಸಹಾಯ ಲಭ್ಯವಿದ್ದು, ಅದನ್ನು ಡಿಸ್ಟಿಲರಿಗಳನ್ನು ಸ್ಥಾಪಿಸಲು ಬಳಸಿಕೊಳ್ಳಬಹುದು.
  • ರಾಜ್ಯದ ಸಕ್ಕರೆ ಕಾರ್ಖಾನೆಗಳು ಸಾಲ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಎಥೆನಾಲ್ ತಯಾರಿಸದ ಒಂದೇ ಒಂದು ಸಕ್ಕರೆ ಕಾರ್ಖಾನೆ ಇರಬಾರದು.
  • ಉದಯೋನ್ಮುಖ ಮಾರುಕಟ್ಟೆ ಮತ್ತು ದರಗಳು ಸಹ ಉತ್ತಮವಾಗಿವೆ
"ನೀವು ಸರಿಯಾದ ಜಾಗದಲ್ಲಿ ಕುಂತಿದ್ದಿರಿ" ಅಜಿತ್ ಪವಾರ್ ಗೆ ಅಮಿತ್ ಶಾ ಹೀಗೆ ಹೇಳಿದ್ದೇಕೆ? title=

ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ವೇದಿಕೆ ಹಂಚಿಕೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ " ಅಜಿತ್ ಪವಾರ್ ಈಗ 'ದೀರ್ಘ ಸಮಯದ ನಂತರ ಸರಿಯಾದ ಸ್ಥಳದಲ್ಲಿ'ಕುಳಿತಿದ್ದಾರೆ ಎಂದು ಹೇಳಿದರು. ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಕಳೆದ ತಿಂಗಳು ಏಕನಾಥ್ ಶಿಂಧೆ-ಭಾರತೀಯ ಜನತಾ ಪಕ್ಷ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದರು.

"ಇದು ಅಜಿತ್ ಪವಾರ್ ಅವರೊಂದಿಗಿನ ನನ್ನ ಮೊದಲ ಸಾರ್ವಜನಿಕ ಕಾರ್ಯಕ್ರಮ. ಬಹಳ ಸಮಯದ ನಂತರ ಅವರು ಈಗ ಸರಿಯಾದ ಸ್ಥಳದಲ್ಲಿ ಕುಳಿತಿದ್ದಾರೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಇದು ನಿಮಗೆ ಯಾವಾಗಲೂ ಸರಿಯಾದ ಸ್ಥಳವಾಗಿತ್ತು, ಆದರೆ ನೀವು ಇಲ್ಲಿಗೆ ಕುಳಿತುಕೊಳ್ಳಲು ತುಂಬಾ ತಡವಾಗಿ ಬಂದಿದ್ದೀರಿ" ಎಂದು ಅಮಿತ್ ಪುಣೆಯಲ್ಲಿ ಸಹಕಾರ ಸಂಘಗಳ ಕೇಂದ್ರೀಯ ರಿಜಿಸ್ಟ್ರಾರ್ (CRCS) ಕಚೇರಿಯ ಡಿಜಿಟಲ್ ಪೋರ್ಟಲ್ ಅನ್ನು ಬಿಡುಗಡೆ ಮಾಡಿದ ನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಶಾ ಹೇಳಿದರು.

ಇದನ್ನೂ ಓದಿ-"ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು"

ಈ ಸಂದರ್ಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಉಪಸ್ಥಿತರಿದ್ದರು.

ಹಿರಿಯ ನಾಯಕ ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ಮತ್ತು ಎನ್‌ಸಿಪಿಯ ಎಂಟು ಶಾಸಕರು ಕಳೆದ ತಿಂಗಳು ಶಿಂಧೆ ನೇತೃತ್ವದ ಸರ್ಕಾರಕ್ಕೆ ಸೇರ್ಪಡೆಗೊಂಡಿರುವುದು ಗಮನಾರ್ಹವಾಗಿದೆ.ಅಜಿತ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದೇ ವೇಳೆ ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಮಹಾರಾಷ್ಟ್ರದಲ್ಲಿ ಎಥೆನಾಲ್ ಉತ್ಪಾದಿಸದ ಒಂದೇ ಒಂದು ಸಕ್ಕರೆ ಕಾರ್ಖಾನೆ ಇರಬಾರದು.

"ಸಹಕಾರಿ ಸಂಘಗಳಿಗೆ ವಿವಿಧ ಯೋಜನೆಗಳಡಿಯಲ್ಲಿ ಬೃಹತ್ ಧನಸಹಾಯ ಲಭ್ಯವಿದ್ದು, ಅದನ್ನು ಡಿಸ್ಟಿಲರಿಗಳನ್ನು ಸ್ಥಾಪಿಸಲು ಬಳಸಿಕೊಳ್ಳಬಹುದು. ರಾಜ್ಯದ ಸಕ್ಕರೆ ಕಾರ್ಖಾನೆಗಳು ಸಾಲ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಎಥೆನಾಲ್ ತಯಾರಿಸದ ಒಂದೇ ಒಂದು ಸಕ್ಕರೆ ಕಾರ್ಖಾನೆ ಇರಬಾರದು. ಉದಯೋನ್ಮುಖ ಮಾರುಕಟ್ಟೆ ಮತ್ತು ದರಗಳು ಸಹ ಉತ್ತಮವಾಗಿವೆ" ಎಂದು ಹೇಳಿದರು.

ಇದನ್ನೂ ಓದಿ-ಓಂ ಸಿನಿಮಾ ತರ ರೌಡಿಸಂ ಬಿಡಿಸಿ ಒಳ್ಳೆ ಜೀವನ ನಡೆಸಲು ಮುಂದಾಗಿದ್ದ ಸಿದ್ದಾಪುರ ಮಹೇಶನ ಹೆಂಡತಿ..!

ಅವರು ಪ್ರಾರಂಭಿಸಿದ ಸಿಆರ್‌ಸಿಎಸ್ ಕಚೇರಿಯ ಡಿಜಿಟಲ್ ಪೋರ್ಟಲ್‌ನಲ್ಲಿ ಕೇಂದ್ರ ಸಚಿವರು, "ಡಿಜಿಟಲ್ ಪೋರ್ಟಲ್ ದಕ್ಷತೆ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಆಧುನೀಕರಣ, ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇಲ್ಲದೆ ಸಹಕಾರಿ ಕ್ಷೇತ್ರವು ಮುಂದುವರಿಯಲು ಸಾಧ್ಯವಿಲ್ಲ" ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News