" ಬಿಜೆಪಿ ಸಂಸದನಿಂದ ಕುಸ್ತಿಪಟುಗಳು ಲೈಂಗಿಕ ಕಿರುಕುಳಕ್ಕೆ ಒಳಗಾದಾಗ ನಿಮ್ಮಿಂದ ಒಂದೇ ಒಂದು ಮಾತು ಬರಲಿಲ್ಲ ಯಾಕೆ?"

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಮಾಡಿರುವ ಆರೋಪಕ್ಕೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ತಿರುಗೇಟು ನೀಡಿದ್ದಾರೆ.

Written by - Manjunath N | Last Updated : Aug 10, 2023, 07:27 PM IST
  • ಇಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಫ್ಲೈಯಿಂಗ್ ಕಿಸ್ ಬಗ್ಗೆ ಮಾತನಾಡಿದ್ದಾರೆ
  • ಬಿಜೆಪಿ ಸಂಸದರ ಮೇಲೆ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಬಂದಾಗ ಅವರು ಒಂದು ಮಾತನ್ನೂ ಹೇಳಲಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು
  • ಇದಕ್ಕೆ ಧ್ವನಿಗೂಡಿಸಿದ್ದ ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿಯವರು ಅಸಭ್ಯ ಭಾವದಿಂದ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂಕಾರ್ ಬಿರ್ಲಾ ಅವರಿಗೆ ದೂರು ನೀಡಿದ್ದರು.
 " ಬಿಜೆಪಿ ಸಂಸದನಿಂದ ಕುಸ್ತಿಪಟುಗಳು ಲೈಂಗಿಕ ಕಿರುಕುಳಕ್ಕೆ ಒಳಗಾದಾಗ ನಿಮ್ಮಿಂದ ಒಂದೇ ಒಂದು ಮಾತು ಬರಲಿಲ್ಲ ಯಾಕೆ?" title=
file photo

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಫ್ಲೈಯಿಂಗ್ ಕಿಸ್ ಬಗ್ಗೆ ಮಾಡಿರುವ ಆರೋಪಕ್ಕೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ತಿರುಗೇಟು ನೀಡಿದ್ದಾರೆ.

ಇಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು  ಫ್ಲೈಯಿಂಗ್ ಕಿಸ್ ಬಗ್ಗೆ ಮಾತನಾಡಿದ್ದಾರೆ ಆದರೆ ಬಿಜೆಪಿ ಸಂಸದರ ಮೇಲೆ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಬಂದಾಗ ಅವರು ಒಂದು ಮಾತನ್ನೂ ಹೇಳಲಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ಇದನ್ನೂ ಓದಿ: ನೂರು ದಿನದೊಳಗೆ ೧೦೦ ಪರ್ಸೆಂಟ್ ಸರ್ಕಾರ : ಸುನಿಲ್ ಕುಮಾರ್

ನಿನ್ನೆ ನಡೆದ ಅವಿಶ್ವಾಸ ನಿರ್ಣಯದ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರ ಫ್ಲೈಯಿಂಗ್ ಕಿಸ್ ವಿಷಯವನ್ನು ಪ್ರಸ್ತಾಪಿಸಿದ ಶ್ರೀಮತಿ ಇರಾನಿ ಸದನದಲ್ಲಿ ಈ ರೀತಿಯ ಅಸಭ್ಯ ಕೃತ್ಯ ನಡೆದಿರಲಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: 0 ವರ್ಷ ಮೇಲ್ಪಟ್ಟ ನಂತರ ತೂಕ ಇಳಿಕೆಗೆ ಈ ಅಂಶಗಳೇ ಸಹಾಯವಾಗುವುದು! ಟ್ರೈ ಮಾಡಿ ನೋಡಿ

ಇದಕ್ಕೆ ಧ್ವನಿಗೂಡಿಸಿದ್ದ ಬಿಜೆಪಿ ಮಹಿಳಾ ಸಂಸದರು ರಾಹುಲ್ ಗಾಂಧಿಯವರು ಅಸಭ್ಯ ಭಾವದಿಂದ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂಕಾರ್ ಬಿರ್ಲಾ ಅವರಿಗೆ ದೂರು ನೀಡಿದ್ದರು.

ಈಗ ಈ ಆರೋಪಕ್ಕೆ ಪ್ರತಿಯಾಗಿ ತಿರುಗೇಟು ನೀಡಿರುವ ಶ್ರೀಮತಿ ಮೊಯಿತ್ರಾ ಬಿಜೆಪಿ ಸಂಸದ ಮತ್ತು ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಹೆಸರಿಸದೆ  “ಬಿಜೆಪಿ ಸಂಸದರೊಬ್ಬರು ನಮ್ಮ ಚಾಂಪಿಯನ್ ಕುಸ್ತಿಪಟುಗಳಿಂದ ಕಿರುಕುಳ ಮತ್ತು ಕಿರುಕುಳದ ಆರೋಪವನ್ನು ಮಾಡಿದಾಗ, ನಾವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಂದ  ಒಂದೇ ಒಂದು ಮಾತನ್ನು ಕೇಳಲಿಲ್ಲ,ಆದರೆ ಅವರು ಈಗ  ಫ್ಲೈಯಿಂಗ್ ಕಿಸ್ ಬಗ್ಗೆ ಮಾತನಾಡುತ್ತಿದ್ದಾರೆ.ನಿಮ್ಮ ಆದ್ಯತೆಗಳು ಎಲ್ಲಿವೆ ಮೇಡಂ ?" ಎಂದು ಮೊಹುವಾ ಮೊಯಿತ್ರಾ ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News