ನವದೆಹಲಿ: ಲೋಕಾಯುಕ್ತ ನೇಮಕ ಮಾಡಿಲ್ಲದ ಕುರಿತು 12 ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸುಪ್ರೀಂಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸಹ ಅದರಲ್ಲಿ ಸೂಚಿಸಲಾಗಿದೆ.
ಲೋಕಾಯುಕ್ತ ನೇಮಕ ವಿಚಾರವಾಗಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ(ಮಾರ್ಚ್23) ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದೆಹಲಿ, ತಮಿಳುನಾಡು, ಪುದುಚೇರಿ, ಮೇಘಾಲಯ, ಜಮ್ಮು-ಕಾಶ್ಮೀರ, ಮಿಜೋರಾಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ತೆಲಂಗಾಣ, ತ್ರಿಪುರ ಮತ್ತು ಮಣಿಪುರ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಸಮನ್ಸ್ ಜಾರಿ ಮಾಡಿ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ತಾಕೀತು ಮಾಡಿದೆ. ಜೊತೆಗೆ ಲೋಕಾಯುಕ್ತರನ್ನು ಯಾವಾಗ ನೇಮಕ ಮಾಡುವಿರಿ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆಯೂ ಕೋರ್ಟ್ ಸೂಚಿಸಿದೆ.