ನವದೆಹಲಿ: ಉಕ್ರೇನ್‌ನಲ್ಲಿರುವ ತನ್ನ 18,000 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಕ್ಷಿಸಲು ಭಾರತವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.


COMMERCIAL BREAK
SCROLL TO CONTINUE READING

ಸದ್ಯಕ್ಕೆ, ಉಕ್ರೇನ್‌ನಲ್ಲಿ ರಷ್ಯಾದ ಮಿಲಿಟರಿ ಕಾರ್ಯಾಚರಣೆಯಿಂದಾಗಿ ನವದೆಹಲಿ ಮತ್ತು ಕೀವ್ ನಡುವಿನ ವಿಮಾನಗಳನ್ನು ನಿಲ್ಲಿಸಲಾಗಿದೆ.ಆದಾಗ್ಯೂ, ಸರ್ಕಾರವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಭಾರತೀಯ ನಾಗರಿಕರನ್ನು ಸ್ಥಳಾಂತರಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದೆ.


ಇದನ್ನೂ ಓದಿ: Russia-Ukraine War:ಯುದ್ಧದ ಮಧ್ಯೆ ಭಾವನಾತ್ಮಕ ಚಿತ್ರ! ಉಕ್ರೇನಿಯನ್ ಮಹಿಳೆ ಅಳುತ್ತಿರುವ ಫೋಟೋ ವೈರಲ್


ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಗಳನ್ನು ಸಹ ಬಿಡುಗಡೆ ಮಾಡಿದ್ದು ಮತ್ತು ಸ್ಥಳಾಂತರದ ವ್ಯವಸ್ಥೆಗಳ ಬಗೆಗಿನ ನವೀಕರಣಗಳಿಗಾಗಿ ತನ್ನ ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮವನ್ನು ಅನುಸರಿಸಲು ನಾಗರಿಕರಿಗೆ ನಿರ್ದೇಶಿಸುತ್ತದೆ.


ಇದನ್ನೂ ಓದಿ: 'ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದಾಗಿ ಪ್ರತಿ ಟೆಸ್ಟ್ ಸರಣಿಯು ಅತ್ಯಂತ ಮಹತ್ವದ್ದಾಗಿದೆ'


ಉಕ್ರೇನ್‌ನಿಂದ ಭಾರತಕ್ಕೆ ಬರಲು ಕಾತರದಿಂದ ಕಾಯುತ್ತಿರುವವರಲ್ಲಿ ಹೆಚ್ಚಿನವರು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಾಗಿದ್ದಾರೆ. ಈ ಹಿನ್ನಲೆಯಲ್ಲಿ ಈಗ ವೈದ್ಯಕೀಯ ಶಿಕ್ಷಣಕ್ಕೆ ಉಕ್ರೇನ್ ಹೆಸರು ವಾಸಿಯಾಗಿರುವುದೇಕೆ? ಎನ್ನುವುದರ ಕುರಿತಾದ ಮಾಹಿತಿಯನ್ನುನೀಡುವ ಪ್ರಯತ್ನ ಮಾಡಿದ್ದೇವೆ.


ಉಕ್ರೇನ್‌ನಲ್ಲಿ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ.ಇದಕ್ಕೆ ಕಾರಣ ಪ್ರಮುಖ ಕಾರಣವೆಂದರೆ ಭಾರತದಲ್ಲಿನ ಕಾಲೇಜುಗಳಿಗೆ ಹೋಲಿಸಿದರೆ ಉಕ್ರೇನ್‌ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜುಗಳ ಬೋಧನಾ ಶುಲ್ಕವು ಅಗ್ಗವಾಗಿದೆ.ಉಕ್ರೇನಿಯನ್ ಕಾಲೇಜುಗಳು ವಿಶ್ವ ಆರೋಗ್ಯ ಮಂಡಳಿಯಿಂದ ಗುರುತಿಸಲ್ಪಟ್ಟಿವೆ.ಭಾರತೀಯ ವೈದ್ಯಕೀಯ ಮಂಡಳಿಯು ಸಹ ಅವುಗಳನ್ನು ಗುರುತಿಸುವುದರಿಂದ ಪದವಿಗಳು ಭಾರತದಲ್ಲಿ ಬಹಳ ಮಾನ್ಯವಾಗಿವೆ.


ಇದನ್ನೂ ಓದಿ: Sourav Ganguly: ಬಿಸಿಸಿಐ ಮುಖ್ಯಸ್ಥ ಗಂಗೂಲಿ ಕುರ್ಚಿಯೂ ಹೋಗುತ್ತಾ? ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಸ್ಪರ್ಧಿಗಳು!


ಇದರ ಹೊರತಾಗಿ, ಉಕ್ರೇನಿಯನ್ ವೈದ್ಯಕೀಯ ಪದವಿಗಳನ್ನು ಪಾಕಿಸ್ತಾನದ ವೈದ್ಯಕೀಯ ಮತ್ತು ದಂತ ಕೌನ್ಸಿಲ್, ಯುರೋಪಿಯನ್ ಕೌನ್ಸಿಲ್ ಆಫ್ ಮೆಡಿಸಿನ್ ಮತ್ತು ಯುನೈಟೆಡ್ ಕಿಂಗ್‌ಡಂನ ಜನರಲ್ ಮೆಡಿಕಲ್ ಕೌನ್ಸಿಲ್ ಮೂಲಕ ಗುರುತಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.