ನವದೆಹಲಿ: ಎಲ್ಲಾ ಸೇವೆಗಳಿಗೆ ಆಧಾರ್ ಕಡ್ಡಾಯವೇ ಎಂಬ ಕುರಿತು ಸುಪ್ರೀಂ ಕೋರ್ಟ್ ಬುಧವಾರ(ಸೆ.26) ಮಹತ್ವದ ತೀರ್ಪು ಪ್ರಕಟಿಸಲಿದೆ. 


COMMERCIAL BREAK
SCROLL TO CONTINUE READING

ಆಧಾರ್ ಯೋಜನೆ ಮತ್ತು ಅದಕ್ಕೆ ಸಂಬಂಧಿಸಿದ ಕಾನೂನುಗಳ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತರಕ್ಷಣಾ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಇವರು ಸದಸ್ಯರ ಸಂವಿಧಾನಿಕ ಪೀಠ ತೀರ್ಪನ್ನು ಸೆಪ್ಟೆಂಬರ್ 26ಕ್ಕೆ ಕಾಯ್ದಿರಿಸಿತ್ತು.


ದೇಶದ ಏಕೈಕ ಬಯೋಮೆಟ್ರಿಕ್‌ ರಾಷ್ಟ್ರೀಯ ಗುರುತಿನ ಚೀಟಿಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್.ಪುಟ್ಟಸ್ವಾಮಿ ಸೇರಿದಂತೆ ಒಟ್ಟು 27 ಮಂದಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ಸುದೀರ್ಘ ವಿಚಾರಣೆ ಬಳಿಕ ಮೇ.10ರಂದು ಸುಪ್ರೀಂ ತೀರ್ಪು ಕಾಯ್ದಿರಿಸಿತ್ತು.


ಆಧಾರ್ ಯೋಜನೆಗೆ ಸಾಂವಿಧಾನಿಕ ಸ್ವರೂಪ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2016ರಲ್ಲಿ ಅಧಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಅಲ್ಲದೆ, ಬ್ಯಾಂಕ್ ಖಾತೆ, ಪ್ಯಾನ್ ಕಾರ್ಡ್, ರೇಷನ್ ಕಾರ್ಡ್ ಸೇರಿದಂತೆ ವಿವಿಧ ಸೇವೆಗಳಿಗೆ ಆಧಾರ್ ಜೋಡಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿತ್ತು. ಇದೀಗ ನಾಳಿನ ಸುಪ್ರೀಂ ಕೋರ್ಟ್ ತೀರ್ಪು ಸಾಕಷ್ಟು ಕುತೂಹಲ ಮೂಡಿಸಿದೆ.