ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಳಂದಾದಿಂದ ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಸತತ ಮೂರನೇ ಅವಧಿಗೆ ಸೇವೆ ಸಲ್ಲಿಸುತ್ತಿರುವ ಹಾಲಿ ಸಂಸದ ಕೌಶಲೇಂದ್ರ ಕುಮಾರ್, ತಮ್ಮ ಆಪ್ತರು ಚುನಾವಣಾ ಕಣಕ್ಕೆ ಇಳಿಯಲು ಬಯಸಿದರೆ ಸ್ಥಾನವನ್ನು ಬಿಟ್ಟುಕೊಡಲು ಸಿದ್ಧ ಎಂದು ಶನಿವಾರ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ನನ್ನ ಮತ್ತು‌ ನನ್ನ ಸಂಬಂಧಿಕರ ಮನೆ ಮೇಲೆ ರೇಡ್ ಮಾಡುವ ಹುನ್ನಾರ ನಡೆದಿದೆ"


ಈ ಹಿನ್ನೆಲೆಯಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು " ಅದನ್ನು ಸುಮ್ಮನೆ ಬಿಡಿ. ನೀವೇಕೆ ಚಿಂತಿಸುತ್ತೀರಿ? ಎಂದು ಅವರು ಹೇಳಿದ್ದಾರೆ.ಕಳೆದ ವರ್ಷ ಆಗಸ್ಟ್‌ನಲ್ಲಿ ನಿತೀಶ್ ಕುಮಾರ್ ಬಿಜೆಪಿಯನ್ನು ತ್ಯಜಿಸಿದ ಸ್ವಲ್ಪ ಸಮಯದ ನಂತರ, ಅವರು ಪಕ್ಕದ ಉತ್ತರ ಪ್ರದೇಶದ ಫುಲ್‌ಪುರದಿಂದ ಸ್ಪರ್ಧಿಸಬಹುದು ಎಂಬ ಊಹಾಪೋಹಗಳು ಇದ್ದವು, ಈ ಹಿಂದೆ ಜವಾಹರ್ ಲಾಲ್ ನೆಹರು ಅವರು ಪ್ರತಿನಿಧಿಸುತ್ತಿದ್ದ ಲೋಕಸಭಾ ಕ್ಷೇತ್ರವಾಗಿದೆ, ಅಲ್ಲಿ ಗಣನೀಯ ಪ್ರಮಾಣದ ಕುರ್ಮಿ ಸಮುದಾಯದ ಮತದಾರರಿದ್ದಾರೆ.


ಇದನ್ನೂ ಓದಿ: ಖಾನಾಪುರ ಕೈ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಪರ ಪ್ರಿಯಾಂಕಾ ಪ್ರಚಾರ


ಇದೇ ವೇಳೆ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಮೂಲಕ ಮಾಜಿ ಮಿತ್ರಪಕ್ಷ ಬಿಜೆಪಿಯನ್ನು ಸೋಲಿಸುವುದಾಗಿ ಪಣ ತೊಟ್ಟಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿಯವರ 100ನೇ ಸಂಚಿಕೆ ‘ಮನ್ ಕಿ ಬಾತ್’ ಬಗ್ಗೆಯೂ ಪ್ರತಿಕ್ರಿಯಿಸಲು ನಿರಾಕರಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.