ನವದೆಹಲಿ: ಭವಿಷ್ಯದಲ್ಲಿ ಅಮಿತ್ ಶಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿಕೆಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿರುವ ಬೆನ್ನಲ್ಲೇ ಈಗ ಅಮಿತ್ ಶಾ ಅವರು ಪ್ರತಿಕ್ರಿಯಿಸಿದ್ದಾರೆ.
IPL 2024: ಬೆಂಗಳೂರಿನಲ್ಲಿ ಇಂದು RCB ಪಂದ್ಯ, ಈ 4 ಪ್ರಮುಖ ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ !
ಈ ಕುರಿತಾಗಿ ಮಾತನಾಡಿದ ಅಮಿತ್ ಶಾ 'ನಾನು ಅರವಿಂದ್ ಕೇಜ್ರಿವಾಲ್ ಮತ್ತು ಕಂಪನಿ ಮತ್ತು ಇಂಡಿಯಾ ಬ್ಲಾಕ್‌ಗೆ ಇದನ್ನು ಹೇಳಲು ಬಯಸುತ್ತೇನೆ, ಬಿಜೆಪಿಯ ಸಂವಿಧಾನದಲ್ಲಿ ಅಂತಹ ಯಾವುದೇ 75 ವರ್ಷಗಳ ಮಿತಿ ನಿಯಮವನ್ನು ಉಲ್ಲೇಖಿಸಲಾಗಿಲ್ಲ. ಪ್ರಧಾನಿ ಮೋದಿ ಈ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದಾರೆ ಮತ್ತು ಭವಿಷ್ಯದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ' ಎಂದು ಅವರು ಸ್ಪಷ್ಟಪಡಿಸಿದರು
#WATCH | On Delhi CM Arvind Kejriwal's 'Amit Shah will be the PM, if BJP wins' remark, Union Home Minister Amit Shah says "I want to say this to Arvind Kejriwal and company and INDI alliance that nothing as such is mentioned in BJP's constitution. PM Modi is only going to… https://t.co/eJgCHox2Q7 pic.twitter.com/bKJQ4OtMhe
— ANI (@ANI) May 11, 2024
ಇದನ್ನೂ ಓದಿ: ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕು!
ಇದಕ್ಕೂ ಮೊದಲು ಅರವಿಂದ ಕೇಜ್ರಿವಾಲ್ ಮಾತನಾಡಿ 'ಈ ಜನರು ಇಂಡಿಯಾ ಬಣವನ್ನು ಪ್ರಧಾನ ಮಂತ್ರಿಯ ಅಭ್ಯರ್ಥಿಯ ಬಗ್ಗೆ ಕೇಳುತ್ತಾರೆ.ನಾನು ಬಿಜೆಪಿಯನ್ನು ಕೇಳುತ್ತೇನೆ ಅವರ ಪ್ರಧಾನಿ ಯಾರು? ಮೋದಿಜಿ ಮುಂದಿನ ವರ್ಷ ಸೆಪ್ಟೆಂಬರ್ 17 ರಂದು 75 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.ಅವರೇ 2014 ರಲ್ಲಿ 75 ವರ್ಷ ವಯಸ್ಸಿನವರು ನಿವೃತ್ತರಾಗುತ್ತಾರೆ ಎಂದು ನಿಯಮ ಮಾಡಿದರು. ಈ ನಿಯಮದನ್ವಯ ಎಲ್‌ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಮಿತ್ರಾ ಮಹಾಜನ್ ಅವರನ್ನು ನಿವೃತ್ತಗೊಳಿಸಿದರು ಎಂದು ಕೇಜ್ರಿವಾಲ್ ಹೇಳಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.