ನವದೆಹಲಿ: ‘ಪಂಚ’ ರಾಜ್ಯಗಳ ಚುನಾವಣೆಯಲ್ಲಿ ಹೀನಾಯ ಸೋಲು(5 State Election Result) ಕಂಡಿರುವ ಕಾಂಗ್ರೆಸ್ ಗೆ ದೊಡ್ಡ ಆಘಾತವುಂಟಾಗಿದೆ. ‘ಕೈ’ ಪಕ್ಷ ಇದೀಗ ಭವಿಷ್ಯದ ಅಸ್ತಿತ್ವಕ್ಕಾಗಿ ಹೋರಾಟ ನಡೆಸುವಂತಾಗಿದೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (ಸಿಡಬ್ಲ್ಯುಸಿ) ಭಾನುವಾರ ಸಭೆ ಸೇರಿ ಪಕ್ಷದ ಸೋಲಿನ ಕಾರಣಗಳ ಬಗ್ಗೆ ಪರಾಮರ್ಶೆ ನಡೆಸಿ ಮುಂದಿನ ಹಾದಿಯ ಬಗ್ಗೆ ಚರ್ಚಿಸಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭಾನುವಾರ ಸಂಜೆ 4 ಗಂಟೆಗೆ ಸಿಡಬ್ಲ್ಯೂಸಿ ಸಭೆ(CWC Meeting)ಯನ್ನು ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜೀನಾಮೆ ಸುದ್ದಿ ನಿರಾಕರಿಸಿದ ಸುರ್ಜೇವಾಲಾ
ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ(Randeep Surjewala) ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜೀನಾಮೆ ನೀಡುತ್ತಾರೆಂಬ ಸುದ್ದಿಯನ್ನು ನಿರಾಕರಿಸಿದ್ದಾರೆ. ಉನ್ನತ ನಾಯಕರು ರಾಜೀನಾಮೆ ನೀಡುವ ಬಗ್ಗೆ ಊಹಾಪೋಹಗಳು ಹಬ್ಬಿದ್ದು, ಇವೆಲ್ಲಾ ಸುಳ್ಳು ಅಂತಾ ಹೇಳಿದ್ದಾರೆ.
The news story of alleged resignations being carried on NDTV based on unnamed sources is completely unfair, mischievous and incorrect.
It is unfair for a TV channel to carry such unsubstantiated propaganda stories emanating from imaginary sources at the instance of ruling BJP.
— Randeep Singh Surjewala (@rssurjewala) March 12, 2022
‘ಅಜ್ಞಾತ ಮೂಲಗಳ ಆಧಾರದ ಮೇಲೆ ಹೇಳಲಾಗಿರುವ ರಾಜೀನಾಮೆಯ ಸುದ್ದಿಯು ಸಂಪೂರ್ಣವಾಗಿ ಅನಗತ್ಯ ಮತ್ತು ಇದು ಸುಳ್ಳು’ ಎಂದು ಸುರ್ಜೇವಾಲಾ ಹೇಳಿದ್ದಾರೆ. ಮಾಧ್ಯಮಗಳಲ್ಲಿ ವರದಿಯಾಗಿರುವ ರಾಜೀನಾಮೆ(Rahul Gandhi Resign) ಸುದ್ದಿ ಕೇವಲ ಊಹಾಪೋಹವಾಗಿದ್ದು, ಅವುಗಳನ್ನು ನಂಬಬೇಡಿ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ನಾಳೆ ಕಾಂಗ್ರೆಸ್ ಪಕ್ಷದಿಂದ ಪಂಚಸೋಲಿನ ಆತ್ಮಾವಲೋಕನ ಸಭೆ
ಸೋಲಿನ ನಂತರ ವಿಚಾರ ಮಂಥನ
ಪಂಜಾಬ್‌ನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡು(Congress Loose Election) ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ಹೀನಾಯ ಸೋಲು ಕಂಡಿರುವ ಸಂದರ್ಭದಲ್ಲಿ ಕಾಂಗ್ರೆಸ್‌ನ CWC ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ಸೋಲಿಗೆ ಏನು ಕಾರಣ..? ಪಕ್ಷ ಎಡವಿರುವುದು ಎಲ್ಲಿ..? ಪಕ್ಷದ ಮುಂದಿನ ಭವಿಷ್ಯದ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್‌ನ ಮತಗಳ ಪ್ರಮಾಣ ಕುಸಿತ!
ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಲ್ಲಿ ಶೇ.2.33ರಷ್ಟು ಮತಗಳ ಹಂಚಿಕೆಯೊಂದಿಗೆ ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ. ಹೆಚ್ಚಿನ ‘ಕೈ’ ಅಭ್ಯರ್ಥಿಗಳು ತಮ್ಮ ಠೇವಣಿಗಳನ್ನು ಕಳೆದುಕೊಂಡಿದ್ದಾರೆ. ಉತ್ತರಪ್ರದೇಶದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ(Priyanka Gandhi) ವಾದ್ರಾ ನೇತೃತ್ವದಲ್ಲಿ ಮಹಿಳೆಯರು ಮತ್ತು ಯುವಜನರನ್ನು ಕೇಂದ್ರೀಕರಿಸಿ ನಡೆಸಿದ ತೀವ್ರ ಪ್ರಚಾರದ ಹೊರತಾಗಿಯೂ ಪಕ್ಷವು ಯಾವುದೇ ಯಶಸ್ಸನ್ನು ಪಡೆಯಲಿಲ್ಲ. ಇದಿರಿಂದ ಕಾಂಗ್ರೆಸ್ ನಾಯಕರಿಗೆ ಭಾರೀ ಮುಖಭಂಗ ಉಂಟಾಗಿದೆ.
ಇದನ್ನೂ ಓದಿ: ಜುಲೈ ವೇಳೆಗೆ ರಾಜ್ಯಸಭೆಯಲ್ಲಿ ಭಾರಿ ಬದಲಾವಣೆ...ಪಂಚರಾಜ್ಯ ಫಲಿತಾಂಶದಿಂದ ಕಾಂಗ್ರೆಸ್‌ಗೆ ಕಾದಿದೆ ಆಘಾತ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.