ಕೊಟ್ಟಾಯಂ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. 


COMMERCIAL BREAK
SCROLL TO CONTINUE READING

ಇದುವರೆಗೂ ಉತ್ತರಪ್ರದೇಶದ ಅಮೇಥಿ ಕ್ಷೇತ್ರವನ್ನು ಹೊರತುಪಡಿಸಿ ಕರ್ನಾಟಕದಿಂದ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ಕರ್ನಾಟಕದಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಆಹ್ವಾನ ನೀಡಿದ್ದರು. ಆದರೀಗ ರಾಹುಲ್ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. 


ಈ ಬಗ್ಗೆ ಹೇಳಿಕೆ ಎಎನ್ಐಗೆ ಹೇಳಿಕೆ ನೀಡಿರುವ ಕೇರಳ ಮಾಜಿ ಮುಖ್ಯಮಂತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಮ್ಮನ್ ಚಾಂಡಿ, "ಈಗಾಗಲೇ ಕೇರಳದ ವಯನಾಡಿನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡಿದ್ದೇವೆ, ಒತ್ತಡ ಹಾಕಿದ್ದೇವೆ. ಸದ್ಯ ರಾಹುಲ್ ಗಾಂಧಿ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದು, ಸಕಾರಾತ್ಮಕ ಉತ್ತರ ದೊರೆಯಲಿದೆ ಎಂಬ ನಿರೀಕ್ಷೆಯಿದೆ" ಎಂದು ಹೇಳಿದ್ದಾರೆ.



ಕೇರಳದ 20 ಲೋಕಸಭಾ ಕ್ಷೇತ್ರಗಳಲ್ಲಿ 16 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ. ಆದರೆ ವಯನಾಡ್ ಮತ್ತು ವಡಕರ ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿಲ್ಲ. ಏತನ್ಮಧ್ಯೆ, ಕೊಟ್ಟಾಯಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿಠಲರುಅವರು, ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಯನಾಡಿನಿಂದ ಸ್ಪರ್ಧಿಸಲು ಒತ್ತಾಯಿಸಲಾಗಿತ್ತು ಎಂದು ಹೇಳಿದ್ದಾರೆ.