ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಮಲಯಾಳಂ ದೈನಿಕದಲ್ಲಿ ಬರೆದ ಲೇಖನದ ನಂತರ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ಅವರು ಕೂಡ ಮುಂಚೂಣಿ ಅಭ್ಯರ್ಥಿಯಾಗುತ್ತಾರೆಯೇ ಎನ್ನುವ ಪ್ರಶ್ನೆಗಳು ಎದುರಾಗಿವೆ.
ಆದರೆ ಈ ವಿಚಾರವಾಗಿ ಅವರಿಗೆ ಕೇಳಿದ್ದಕ್ಕೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು, ಆದರೆ ಚುನಾವಣೆ ಪಕ್ಷಕ್ಕೆ ಒಳ್ಳೆಯದು ಎನ್ನುವ ಸಂದೇಶ ಸಾರುವ ಮೂಲಕ ನಿಗೂಡ ನಡೆಯನ್ನು ತಾಳಿದ್ದಾರೆ." ಇದಕ್ಕೆ ನಾನು ಪ್ರತಿಕ್ರಿಯಿಸಲು ಹೋಗುವುದಿಲ್ಲ, ಆದರೆ ನನ್ನ ಲೇಖನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಚುನಾವಣೆ ಒಳ್ಳೆಯದು ಎಂದು ಬರೆದಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ" ಎಂದು ತರೂರ್ ಹೇಳಿದ್ದಾರೆ.
ಇದೆ ವೇಳೆ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷರಾಗಿ ನೇಮಕಗೊಳ್ಳಲು ರಾಹುಲ್ ಗಾಂಧಿ ನಿರಾಕರಿಸಿರುವುದು ನಿರಾಶಾದಾಯಕ ಬೆಳವಣಿಗೆ ಎಂದು ಹೇಳಿದ್ದಾರೆ.ಇನ್ನೂ ಮುಂದುವರೆದು ಮಾತನಾಡಿದ ಅವರು ಕಾಂಗ್ರೆಸ್ ಪಕ್ಷವು ಕೇವಲ ಒಂದೇ ಪಕ್ಷದಿಂದ ಮುನ್ನಡೆಸುತ್ತಿದೆ ಎನ್ನುವ ನಂಬಿಕೆಗೆ ಸೀಮಿತವಾಗಬಾರದು.ಆ ನಿಟ್ಟಿನಲ್ಲಿ ಪಕ್ಷದಲ್ಲಿ ನಡೆಯುವ ಚುನಾವಣೆಗಳು ಸಂಘಟನೆಯ ಪುನಶ್ಚೇತನಕ್ಕೆ ಇಟ್ಟಿರುವ ಮೊದಲ ಹೆಜ್ಜೆ ಎಂದು ಅವರು ಮಲಯಾಳಂ ದಿನಪತ್ರಿಕೆಗೆ ಬರೆದ ಲೇಖನವೊಂದರಲ್ಲಿ ಬರೆದಿದ್ದರು.
ಇದನ್ನೂ ಓದಿ: ರಾಜ್ಯದ ಏಕೈಕ ಸ್ವರ್ಣಗೌರಿ ದೇವಾಲಯದ ಬಗ್ಗೆ ನಿಮಗೆಷ್ಟು ಗೊತ್ತು?
ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವನ್ನು ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಯವರಿಗಿರುವುದರಿಂದ ಅವರು ಪಕ್ಷದ ನಾಯಕತ್ವವನ್ನು ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.
ಎಎನ್‌ಐ ಜೊತೆ ಮಾತನಾಡಿದ ಖರ್ಗೆ, "ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಇಂದು ಸಂಪೂರ್ಣ ಪರಿಸ್ಥಿತಿ ಸ್ಪಷ್ಟವಾಗಿದೆ, ನನ್ನ ವೈಯಕ್ತಿಕ ಅಭಿಪ್ರಾಯ ಮತ್ತು ಎಲ್ಲಾ ಕಾರ್ಯಕರ್ತರ ಅಭಿಪ್ರಾಯದಂತೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಬೇಕು" ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಭಾನುವಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ: ಮಠದ ಆವರಣ ಪರಿಶೀಲಿಸಿದ ಪೊಲೀಸರು!
ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನದ ಚುನಾವಣೆ ಇದೀಗ ಕಾಂಗ್ರೆಸ್ ಗೆ ಸವಾಲಾಗಿ ಪರಿಣಮಿಸಿದೆ.ಈಗ ನಿಗದಿತ ಸಮಯಕ್ಕೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಕೇಂದ್ರ ಚುನಾವಣಾ ಪ್ರಾಧಿಕಾರ ಸಿದ್ಧತೆ ನಡೆಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.