ನವದೆಹಲಿ: ಈರುಳ್ಳಿ ಬೆಲೆಯಲ್ಲಿ ಭಾರಿ ಏರಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಎರಡು ದೊಡ್ಡ ಕ್ರಮಗಳನ್ನು ಕೈಗೊಂಡಿದೆ. ಈರುಳ್ಳಿಯ ಬೆಲೆ ಹೆಚ್ಚಳದ ಬಗ್ಗೆ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ದನಿ ಎತ್ತಿದ ಬಳಿಕ ಕೇಂದ್ರ ಸರ್ಕಾರ ಈ ಕ್ರಮಗಳನ್ನು ಕೈಗೊಂಡಿದೆ. ಈರುಳ್ಳಿಯ ಸಂಗ್ರಹವನ್ನು ಬಿಗಿಗೊಳಿಸುವ ಸಲುವಾಗಿ, ಕೇಂದ್ರ ಸರ್ಕಾರ ಮಂಗಳವಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಈರುಳ್ಳಿಯ ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳ ಷೇರು ಮಿತಿಯನ್ನು ಕ್ರಮವಾಗಿ ಶೇಕಡಾ 50 ರಷ್ಟು 25 ಟನ್ ಮತ್ತು ಐದು ಟನ್‌ಗಳಿಗೆ ಇಳಿಸಿತು. 


COMMERCIAL BREAK
SCROLL TO CONTINUE READING

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಹೊರಡಿಸಿರುವ ಆದೇಶದ ಪ್ರಕಾರ, ದೇಶದ ಎಲ್ಲಾ ರಾಜ್ಯಗಳಲ್ಲಿನ ಈರುಳ್ಳಿ ಸಗಟು ವ್ಯಾಪಾರಿಗಳು ಇನ್ನು ಮುಂದೆ 25 ಟನ್‌ಗಿಂತ ಹೆಚ್ಚು ಈರುಳ್ಳಿಯನ್ನು ದಾಸ್ತಾನು ಮಾಡುವಂತಿಲ್ಲ. ಆಆದರೆ ಚಿಲ್ಲರೆ ವ್ಯಾಪಾರಿಗಳಿಗೆ ಈರುಳ್ಳಿ(Online) ದಾಸ್ತಾನು ಮಿತಿ ಐದು ಟನ್  ಎಂದು ಹೇಳಲಾಗಿದೆ.  ಈ ಆದೇಶ ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಸಚಿವಾಲಯ ತಿಳಿಸಿದೆ. ಆದಾಗ್ಯೂ ಇದು ಆಮದುದಾರರಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.


ಸಗಟು ವ್ಯಾಪಾರಿಗಳು 50 ಟನ್‌ಗಿಂತ ಹೆಚ್ಚು ದಾಸ್ತಾನು ಮಾಡುವಂತಿಲ್ಲ:
ಈರುಳ್ಳಿಯ ಬೆಲೆ ದಿನದಿಂದ ದಿನಕ್ಕೆ ಆಕಾಶ ಮುಟ್ಟುತ್ತಿದೆ. ಸಾರ್ವಜನಿಕರಿಗೆ ಇದರಿಂದ ಪರಿಹಾರ ನೀಡಲು ಕೇಂದ್ರ ಸರ್ಕಾರ ಸೆಪ್ಟೆಂಬರ್ 30 ರಂದು, ಸಗಟು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಈರುಳ್ಳಿಯ ಸ್ಟಾಕ್ ಮಿತಿಯನ್ನು ನಿಗದಿಪಡಿಸಿತ್ತು, ಅದರ ಪ್ರಕಾರ ಸಗಟು ವ್ಯಾಪಾರಿಗಳಿಗೆ ಈರುಳ್ಳಿ ದಾಸ್ತಾನು ಮಿತಿ 50 ಟನ್ ಆಗಿದ್ದರೆ ಚಿಲ್ಲರೆ ವ್ಯಾಪಾರಿಗಳಿಗೆ ಇದು ಐದು ಟನ್. 


ದೆಹಲಿಯಲ್ಲಿ ಈರುಳ್ಳಿ ಬೆಲೆ ಕೆ.ಜಿ.ಗೆ 80 ರೂ.
ರಾಷ್ಟ್ರ ರಾಜಧಾನಿ ದೆಹಲಿಯ ಆಜಾದ್ಪುರ ಮಂಡಿಯಲ್ಲಿ ಈರುಳ್ಳಿ (Onion) ಸಗಟು ಬೆಲೆ ಕೆ.ಜಿ.ಗೆ 80 ರೂ.ಗಳನ್ನು ದಾಟಿದ್ದರೆ, ದೆಹಲಿ-ಎನ್‌ಸಿಆರ್ ಮಾರುಕಟ್ಟೆಗಳಲ್ಲಿ ಚಿಲ್ಲರೆ ಈರುಳ್ಳಿ ಪ್ರತಿ ಕೆ.ಜಿ.ಗೆ 80-130 ರೂ.ಗೆ ಮಾರಾಟವಾಗುತ್ತಿದೆ. ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಅವಿನಾಶ್ ಕುಮಾರ್ ಶ್ರೀವಾಸ್ತವ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈರುಳ್ಳಿ ಹಣದುಬ್ಬರವನ್ನು ನಿಯಂತ್ರಿಸಲು ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.


ಸಚಿವಾಲಯದ ಪರವಾಗಿ, ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಜಿಲ್ಲಾ ಮಟ್ಟದಲ್ಲಿ ಈರುಳ್ಳಿ ಬೇಡಿಕೆ ಮತ್ತು ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ತಿಳಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರತಿದಿನ ಈರುಳ್ಳಿ ಸ್ಟಾಕ್ ವರದಿಗಳನ್ನು ತಯಾರಿಸಲು ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಂದರೆ ಪ್ರತಿ ಜಿಲ್ಲೆಯಲ್ಲಿ ಈರುಳ್ಳಿ ದಾಸ್ತಾನು ಹೊಂದಿರುವ ವ್ಯಾಪಾರಿಗಳ ಮಾಹಿತಿಯನ್ನು ಸಚಿವಾಲಯಕ್ಕೆ ತಿಳಿಸುವನ್ತೆಯೂ ಹಾಗೂ ಈರುಳ್ಳಿ ಸಂಗ್ರಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.