Lockdown Latest News : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಬೀಳುತ್ತಾ ಲಾಕ್ ಡೌನ್
ರಾಜಧಾನಿ ದೆಹಲಿಯಲ್ಲಿ ಪ್ರತಿದಿನ 1500 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಕೊರೊನಾ ಸೋಂಕು ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತುರ್ತು ಸಭೆ ಕರೆದಿದ್ದಾರೆ.
ನವದೆಹಲಿ : Lockdown Latest News: ದೇಶದಲ್ಲಿ ಮತ್ತೆ ಕರೋನಾ (Coronavirus) ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿ (Delhi) ಸೇರಿದಂತೆ ೧೨ ರಾಜ್ಯಗಳಲ್ಲಿ ಪ್ರಕರಣಗಳು ಹೆಚ್ಚುತ್ತಿದ್ದು ಕಟ್ಟುನಿಟ್ಟಿನ ಕ್ರಮಕ್ಕೆ ಈಗಾಗಲೇ ಸೂಚಿಸಲಾಗಿದೆ. ಕರೋನಾ ಮಾರ್ಗಸೂಚಿಗಳನ್ನು (Corona guidelines) ತಪ್ಪದೇ ಅನುಸರಿಸುವಂತೆ ಸರ್ಕಾರ ನಿರಂತರ ನಿರ್ದೇಶನಗಳನ್ನು ನೀಡುತ್ತಲೇ ಬಂದಿದೆ.
ರಾಜಧಾನಿ ದೆಹಲಿಯಲ್ಲಿ (Delhi) ಪ್ರತಿದಿನ 1500 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಕೊರೊನಾ ಸೋಂಕು (Coronavirus) ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ತುರ್ತು ಸಭೆ ಕರೆದಿದ್ದಾರೆ. ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ (Satyendar Jain) ಮತ್ತು ಇತರ ಅಧಿಕಾರಿಗಳು ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಭೆ ಕರೆದಿರುವ ಮಧ್ಯೆ, ದೆಹಲಿಯಲ್ಲೂ ಲಾಕ್‌ಡೌನ್ ವಿಧಿಸಲಾಗುತ್ತದೆಯೇ ಎಂಬ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.
ಬಿಜೆಪಿ, ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ, ರಾಜ್ಯಪಾಲರಿಗೆ ಕರೆ ಮಾಡಿದ ದೀದಿ
ಈ ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎನ್ನಲಾಗಿದೆ. ರಾತ್ರಿ ಕರ್ಫ್ಯೂ (Night curfew) , ವಾರಾಂತ್ಯದ ಲಾಕ್‌ಡೌನ್‌ನಂತಹ (Lock down) ಕೆಲವು ನಿರ್ಬಂಧಗಳನ್ನು ಘೋಷಿಸುವ ಸಾಧ್ಯತೆಗಳಿವೆ.
ಇದನ್ನೂ ಓದಿ : ಈ ಅದ್ಬುತ ತರಕಾರಿಯ ಬೆಲೆ ಪ್ರತಿ ಕೆ.ಜಿ.ಗೆ ಒಂದು ಲಕ್ಷ ರೂ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.