ಅಭಿನಂದನ್‌ರನ್ನು ಅತ್ತಾರಿ-ವಾಘಾ ಗಡಿಯಿಂದ ದೆಹಲಿಗೆ ಕರೆತರಲು ಸಿದ್ಧತೆ!

ಭಾರತದ ವಾಯು ವಲಯ ದಾಟಿ ಬುಧವಾರ ಒಳನುಸುಳಿದ್ದ ಪಾಕಿಸ್ತಾನ ಯುದ್ಧ ವಿಮಾನಗಳನ್ನು ದೇಶದ ಯುದ್ಧ ವಿಮಾನಗಳು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದವು. ಇದೇ ಕಾರ್ಯಾಚರಣೆಯಲ್ಲಿ ಭಾರತದ ಒಂದು ಮಿಗ್‌ 21 ಯುದ್ಧ ವಿಮಾನ ಪತನಗೊಂಡಿತ್ತು. ಅದರ ಫೈಲಟ್‌ ಅಭಿನಂದನ್‌ ಪಾಕ್‌ ಗಡಿಯಲ್ಲಿ ಇಳಿದಿದ್ದರು. ಬಳಿಕ ಅವರನ್ನು ಪಾಕ್‌ ಸೇನೆ ವಶಕ್ಕೆ ಪಡೆದಿತ್ತು.

Last Updated : Mar 1, 2019, 03:57 PM IST
ಅಭಿನಂದನ್‌ರನ್ನು ಅತ್ತಾರಿ-ವಾಘಾ ಗಡಿಯಿಂದ ದೆಹಲಿಗೆ ಕರೆತರಲು ಸಿದ್ಧತೆ! title=

ನವದೆಹಲಿ: ಭಾರತದ ವಾಯು ವಲಯ ದಾಟಿ ಬುಧವಾರ ಒಳನುಸುಳಿದ್ದ ಪಾಕಿಸ್ತಾನ ಯುದ್ಧ ವಿಮಾನಗಳನ್ನು ದೇಶದ ಯುದ್ಧ ವಿಮಾನಗಳು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ್ದವು. ಇದೇ ಕಾರ್ಯಾಚರಣೆಯಲ್ಲಿ ಭಾರತದ ಒಂದು ಮಿಗ್‌ 21 ಯುದ್ಧ ವಿಮಾನ ಪತನಗೊಂಡಿತ್ತು. ಅದರ ಫೈಲಟ್‌ ಅಭಿನಂದನ್‌ ಪಾಕ್‌ ಗಡಿಯಲ್ಲಿ ಇಳಿದಿದ್ದರು. ಬಳಿಕ ಅವರನ್ನು ಪಾಕ್‌ ಸೇನೆ ವಶಕ್ಕೆ ಪಡೆದಿತ್ತು. ಇಂದು ನಮ್ಮ ವೀರಯೋಧ ಅಭಿನಂದನ್‌ರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸುತ್ತಿದೆ. 

ಶುಕ್ರವಾರ ಮಧ್ಯಾಹ್ನ ವಾಘಾ ಬಾರ್ಡರ್ ಮೂಲಕ ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾಹ್ ಮಹಮೂದ್ ಖುರೇಷಿ ದೃಢಪಡಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿನ ಭಾರತೀಯ ಹೈಕಮಿಷನ್ ವಿಂಗ್ ಕಮಾಂಡರ್ ಅಭಿನಂದನ್ ಹಿಂದಿರುಗಿದ ದಾಖಲೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಅಭಿನಂದನ್ ಈಗಾಗಲೇ ಇಸ್ಲಾಮಾಬಾದ್ ನಿಂದ ಲಾಹೋರ್ ಗೆ ತಲುಪಿದ್ದಾರೆ.

ಭಾರತದ ವೀರಪುತ್ರ, ವಿಂಗ್ ಕಮಾಂಡರ್‌ ಅಭಿನಂದನ್ ವರ್ಧಮಾನ್ ಅವರಿಗೆ ವೀರೋಚಿತವಾಗಿ ಸ್ವಾಗತಿಸಲು ಭಾರತೀಯ ವಾಯುಪಡೆ ತಂಡ ಅತ್ತಾರಿ-ವಾಘಾ ಗಡಿಯಲ್ಲಿ ಸಜ್ಜಾಗಿ ನಿಂತಿದೆ. ಅಭಿನಂದನ್‌ರನ್ನು ಅತ್ತಾರಿ-ವಾಘಾ ಗಡಿಯಿಂದ ಅಮೃತಸರ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಕರೆತರಲು ಸಿದ್ಧತೆ ನಡೆಸಲಾಗಿದೆ.

Trending News