ನ.18 ರಿಂದ ಡಿ.24 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ?

ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತಿದೆ. ಈ ಅಧಿವೇಶನದಲ್ಲಿ, ಸರ್ಕಾರವು ಅನೇಕ ಪ್ರಮುಖ ಸುಗ್ರೀವಾಜ್ಞೆಗಳನ್ನು ಕಾನೂನಾಗಿ ಮಾಡಲು ಪ್ರಯತ್ನಿಸುತ್ತದೆ ಎಂದು ಮೂಲಗಳು ತಿಳಿಸಿವೆ.

Last Updated : Oct 17, 2019, 10:58 AM IST
ನ.18 ರಿಂದ ಡಿ.24 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ? title=

ನವದೆಹಲಿ: ನವೆಂಬರ್ 18 ಮತ್ತು ಡಿಸೆಂಬರ್ 24 ರ ನಡುವೆ ಸಂಸತ್ತಿನ ಚಳಿಗಾಲದ ಅಧಿವೇಶನ ಕರೆಯುವ ಸಾಧ್ಯತೆ ಇದೇ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ  ಬುಧವಾರ ಕೇಂದ್ರ ಸಚಿವ ಸಂಪುಟದ ಸಂಸದೀಯ ವ್ಯವಹಾರಗಳ ಸಮಿತಿಯ ಪ್ರಮುಖ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸಿದ್ದರು. 

ಚಳಿಗಾಲದ ಅಧಿವೇಶನದ ದಿನಾಂಕವನ್ನು ನಿರ್ಧರಿಸಲು ಸಂಸದೀಯ ವ್ಯವಹಾರಗಳ ಸಮಿತಿಯ ಸಭೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತಿದೆ. ಈ ಅಧಿವೇಶನದಲ್ಲಿ, ಸರ್ಕಾರವು ಅನೇಕ ಪ್ರಮುಖ ಸುಗ್ರೀವಾಜ್ಞೆಗಳನ್ನು ಕಾನೂನಾಗಿ ಮಾಡಲು ಪ್ರಯತ್ನಿಸುತ್ತದೆ ಎಂದು ಮೂಲಗಳು ತಿಳಿಸಿವೆ.

Trending News