2024ರ ಲೋಕಸಭಾ ಚುನಾವಣೆ ಮೇಲೆ ಬಿಜೆಪಿ ಕಣ್ಣು: ‘ಬ್ಲೂಪ್ರಿಂಟ್’ ತಯಾರಿಸಿದ ನಡ್ಡಾ!

2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ

Last Updated : Nov 22, 2020, 05:14 PM IST
  • 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ
  • ಜೆ. ಪಿ. ನಡ್ಡಾ ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ರಾಷ್ಟ್ರದಾದ್ಯಂತ ಪ್ರವಾಸ
  • ಎಲ್ಲಾ ಬೂತ್ ಮಟ್ಟದ ಮುಖ್ಯಸ್ಥರೊಂದಿಗೆ ವರ್ಚುಯಲ್ ಸಭೆ
2024ರ ಲೋಕಸಭಾ ಚುನಾವಣೆ ಮೇಲೆ ಬಿಜೆಪಿ ಕಣ್ಣು: ‘ಬ್ಲೂಪ್ರಿಂಟ್’ ತಯಾರಿಸಿದ ನಡ್ಡಾ!  title=

ನವದೆಹಲಿ: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ರಾಷ್ಟ್ರದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಡಿಸೆಂಬರ್ ಮೊದಲ ವಾರದಿಂದ ರಾಷ್ಟ್ರದಾದ್ಯಂತ ಜೆ. ಪಿ. ನಡ್ಡಾ(J.P. Nadda) ಪ್ರವಾಸ ಆರಂಭಿಸಲಿದ್ದು, ಉತ್ತರ್ ಖಂಡ್ ಮೊದಲ ರಾಜ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.

2024ರ ಲೋಕಸಭಾ ಚುನಾವಣೆ ಮೇಲೆ ಬಿಜೆಪಿ ಕಣ್ಣು: ‘ಬ್ಲೂಪ್ರಿಂಟ್’ ತಯಾರಿಸಿದ ನಡ್ಡಾ!

ಡಿ. 5ರಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸುವ ಸಾಧ್ಯತೆಯಿದ್ದು, ಪ್ರತಿಯೊಂದು ರಾಜ್ಯಕ್ಕೂ ಭೇಟಿ ನೀಡಿ, ಎಲ್ಲಾ ಬೂತ್ ಮಟ್ಟದ ಮುಖ್ಯಸ್ಥರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಪ್ರತಿಯೊಂದು ರಾಜ್ಯದ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಹಿರಿಯ ಮುಖಂಡರು ಮಾತ್ರವಲ್ಲದೇ, ಪಕ್ಷದ ಶಾಸಕರು ಹಾಗೂ ಸಂಸದರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.

CBSE 12th Practical Exam Date: ಸಿಬಿಎಸ್ಇ 12ನೇ ತರಗತಿಯ ಪ್ರಾಯೋಗಿಕ ಪರೀಕ್ಷೆಯ ದಿನಾಂಕ ಘೋಷಣೆ

ಪ್ರವಾಸದ ವೇಳೆಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸದ ಲೋಕಸಭಾ ಕ್ಷೇತ್ರಗಳು ಹಾಗೂ ವಲಯಗಳಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪಕ್ಷದ ಮುಖಂಡರೊಂದಿಗೆ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಅವರು ತಿಳಿಸಿದರು.

India Post Recruitment 2020: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ, 2582 ಹುದ್ದೆಗಳು ಖಾಲಿ

ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂನಲ್ಲಿ ಚುನಾವಣೆಗಾಗಿ ಪಕ್ಷದ ಸಿದ್ಧತೆಯನ್ನು ಅವರು ಪರಿಶೀಲನೆ ನಡೆಸಲಿದ್ದಾರೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು.

'PF ಖಾತೆ'ದಾರರಿಗೆ ಭರ್ಜರಿ ಕೊಡುಗೆ ನೀಡಿದ ʼಕೇಂದ್ರ ಸರ್ಕಾರ'

Trending News