NEET exam and paper leak issue: ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ NDA ಸರ್ಕಾರ ಮೂರನೇ ಬಾರಿಗೆ ಅಧಿಕಾರದ ಗದ್ದುಗೆಗೆ ಏರಿದ್ದು, ಸಂಪುಟ ರಚನೆಯನ್ನೂ ಮಾಡಿದೆ. ಇನ್ನೇನು ಕೆಲವೇ ದಿನಗಳಲ್ಲಿ ಈ ಬಾರಿಯ ಕೇಂದ್ರ ಬಜೆಟ್‌ ಮಂಡನೆಗೆ ಸಿದ್ಧತೆಯೂ ನಡೆಯುತ್ತಿದೆ. ಇದಕ್ಕೂ ಮುನ್ನ ಲೋಕಸಭಾ ಮತ್ತು ರಾಜ್ಯಸಭೆಗಳಲ್ಲಿ ಸದನ ನಡೆಸಿ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಇದಲ್ಲದೇ ಹೊಸ ಸರ್ಕಾರವು ಕೆಲವು ಹೊಸ ಕಾನೂನು ಬಿಲ್‌ಗಳನ್ನು ಮಂಡಿಸಿದೆ... 


COMMERCIAL BREAK
SCROLL TO CONTINUE READING

ಸೋಮವಾರ ಲೋಕಸಭೆಯಲ್ಲಿ ಭಾರಿ ಗದ್ದಲ-ಗಲಾಟೆ ನಡುವೆ ಚರ್ಚೆ ಆರಂಭವಾಗಿತ್ತು.. ಸದನದಲ್ಲಿ ನೀಟ್‌ ಅಕ್ರಮ ಭಾರೀ ಸದ್ದು ಮಾಡಿತ್ತು.. ಅಲ್ಲದೇ ಫಾರ್ಮರ್ಸ್‌ ಲಾ ಬಗ್ಗೆ ಕೂಡ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಧ್ವನಿ ಎತ್ತಿದರು. ಸದನದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಭಾಷಣ ಮಾಡುತ್ತಿರುವಾಗ ಆಡಳಿತ ಪಕ್ಷದವರು ಭಾರೀ ಗದ್ದಲ ನಡೆಸಿದರು. ಈ ವೇಳೆ ರಾಹುಲ್‌ ಗಾಂಧಿ ʼಜೈ ಸಂವಿಧಾನʼ ಎನ್ನುವ ಮೂಲಕ ಆಡಳಿತ ಪಕ್ಷಕ್ಕೆ ನಯವಾಗಿ ತಿವಿದರು.


ಇದನ್ನೂ ಓದಿ: ಲೋಕಸಭೆ ಕಲಾಪ ಪುನಾರಂಭ: ಇಂದು ಸಂಸತ್ತಿನಲ್ಲಿ ನೀಟ್ ಬಗ್ಗೆ ಚರ್ಚೆ ಸಾಧ್ಯತೆ


Good News: ಬೆಂಗಳೂರು-ಪಂಢರಾಪುರ ನಡುವೆ ವಿಶೇಷ ರೈಲು ಸಂಚಾರ


ʼನೀಟ್ ಅಕ್ರಮದ ಬಗ್ಗೆ 1 ದಿನ ಪ್ರತ್ಯೇಕ ಚರ್ಚೆಗೆ ನಾವು ಅವಕಾಶ ಕೇಳುತ್ತಿದ್ದೇವೆ. ಇದು ಅತ್ಯಂತ ಪ್ರಮುಖ ವಿಷಯ. 2 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ಇದರಿಂದ ಅನಾನುಕೂಲವಾಗಿದೆ. 70 ಕಡೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಈ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಮಗೆ ಸಂತಸವಾಗುತ್ತದೆ' ಎಂದು ರಾಹುಲ್ ಮನವಿ ಮಾಡಿದರು.


ಇದಕ್ಕೆ ಪ್ರತಿಕ್ರಿಯಿಸಿದ ಲೋಕಸಭಾ ಉಪನಾಯಕ ರಾಜನಾಥ್ ಸಿಂಗ್, ‌ʼಸದನದಲ್ಲಿ ಚರ್ಚೆಗೆ ಕೆಲವು ನೀತಿ ನಿಯಮಗಳಿವೆ. ಅವುಗಳೇ ಸದನವನ್ನು ಗಟ್ಟಿಗೊಳಿಸಿವೆ. ನನ್ನ ದಶಕಗಳ ಅನುಭವದಲ್ಲಿ ವಂದನಾ ನಿರ್ಣಯದ ಚರ್ಚೆ ವೇಳೆ ಬೇರೆ ಯಾವುದೇ ವಿಷಯವನ್ನು ಚರ್ಚೆಗೆ ತೆಗೆದುಕೊಂಡಿಲ್ಲ. ಈ ಚರ್ಚೆ ಮುಗಿದ ಬಳಿಕವೇ ಉಳಿದ ವಿಷಯಗಳ ಚರ್ಚೆ ನಡೆಯುತ್ತದೆ' ಎಂದು ಅಂತಾ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.