ನವದೆಹಲಿ: ಚಲಿಸುತ್ತಿದ್ದ ಮೆಟ್ರೋ ರೈಲಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 16 ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. 


COMMERCIAL BREAK
SCROLL TO CONTINUE READING

ಮಾಹಿತಿ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. 


ಮೃತ ಮಹಿಳೆ ನೋಯ್ಡಾ ಸೆಕ್ಟರ್ 20ಯ ನಿವಾಸಿ ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸೆಕ್ಟರ್ 20ರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.