close

News WrapGet Handpicked Stories from our editors directly to your mailbox

ದೆಹಲಿ: ಮೆಟ್ರೋ ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ

ದೆಹಲಿ ಮೆಟ್ರೋದ ಹಳದಿ ಲೈನಿನ ಆದರ್ಶ ನಗರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಅನಿತಾ(25) ಎಂದು ಗುರುತಿಸಲಾಗಿದೆ. 

PTI | Updated: Aug 17, 2019 , 02:00 PM IST
ದೆಹಲಿ: ಮೆಟ್ರೋ ಹಳಿಗೆ ಹಾರಿ ಮಹಿಳೆ ಆತ್ಮಹತ್ಯೆ

ನವದೆಹಲಿ: ವಿವಾಹಿತ ಮಹಿಳೆಯೊಬ್ಬರು ವೇಗವಾಗಿ ಚಲಿಸುತ್ತಿದ್ದ ಮೆಟ್ರೋ ರೈಲಿನ ಮುಂಭಾಗ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ಶುಕ್ರವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿ ಮೆಟ್ರೋದ ಹಳದಿ ಲೈನಿನ ಆದರ್ಶ ನಗರ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಅನಿತಾ(25) ಎಂದು ಗುರುತಿಸಲಾಗಿದೆ. ಘಟನೆಯಿಂದಾಗಿ ಕೆಲಕಾಲ ಮೆಟ್ರೋ ಸಂಚಾರಕ್ಕೆ ಅಡ್ಡಿಯಾಗಿತ್ತು. ಮಹಿಳೆ ಆತ್ಯಹತ್ಯೆ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ದೆಹಲಿ ಮೆಟ್ರೋದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಹಾಂಗೀರ್ ಪುರಿ ನಿವಾಸಿಯಾದ ಅನಿತಾ ಅವರು, ಧರ್ಮೆಂದರ್ ಎಂಬುವರನ್ನು 2015ರಾಲಿ ವಿವಾಹವಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಮಹಿಳೆಯ ಶವದ ಮರಣೋತ್ತರ ಪರೀಕ್ಷೆಯನ್ನು ಬಾಬು ಜಗಜೀವನ್ ರಾಮ್ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಆಕೆಯ ಪೋಷಕರಿಗೆ ವಿಷಯ ಮುಟ್ಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.