ಕೊಟ್ಟಾಯಂ: ಸೈಬರ್​ ದಾಳಿಗೆ ಮನನೊಂದು ಯುವತಿಯೊಬ್ಬಳು ತನ್ನ ಬದುಕನ್ನೇ ಅಂತ್ಯಗೊಳಿಸಿದ್ದಾಳೆ. ಕೇರಳದ ಕೊಟ್ಟಾಯಂನಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮೃತ ಯುವತಿಯ ಮಾಜಿ ಬಾಯ್​ಫ್ರೆಂಡ್​ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಮೃತ ಯುವತಿಯನ್ನು ಕೊತ್ತನಲ್ಲೂರಿನ ನಿವಾಸಿ ಅಥಿರಾ ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಈಕೆ ಶವವಾಗಿ ಪತ್ತೆಯಾಗಿದ್ದಳು. ಈಕೆಯ ಮಾಜಿ ಬಾಯ್​ಫ್ರೆಂಡ್​ ಅರುಣ್​ ವಿದ್ಯಾಧರಣ್​ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: Sharad Pawar Resigns: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ!


ಅಥಿರಾ ಕೊಟ್ಟಾಯಂನ ಖಾಸಗಿ ಸಂಸ್ಥೆಯಲ್ಲಿ ವೆಬ್​ ಡಿಸೈನರ್​ ಆಗಿ ಕೆಲಸ ಮಾಡುತ್ತಿದ್ದರು. ಈಕೆಯ ಸ್ನೇಹಿತನಾಗಿದ್ದ ಅರುಣ್ ವಿದ್ಯಾಧರನ್ ಫೇಸ್​ಬುಕ್ ಮೂಲಕ ಆಕೆಯ ವಿರುದ್ಧ ಸೈಬರ್ ದಾಳಿ ನಡೆಸಿದ್ದನೆಂದು ಹೇಳಲಾಗಿದೆ. ಹೀಗಾಗಿ ಆಥಿರಾ ಅವರು ಅರುಣ್​ ಜೊತೆಗಿನ ಸ್ನೇಹವನ್ನು ತ್ಯಜಿಸಿದ್ದರು. ಅಥಿರಾಗೆ ಮದುವೆ ಪ್ರಸ್ತಾಪ ಬರುತ್ತಿವೆ ಎಂಬುದನ್ನು ತಿಳಿದುಕೊಂಡಿದ್ದ ಅರುಣ್, ಸೋಷಿಯಲ್ ಮೀಡಿಯಾ ಮೂಲಕ ಅಥಿರಾಳನ್ನು ನಿಂದಿಸಿದ್ದನಂತೆ. ಫೇಸ್​ಬುಕ್​ನಲ್ಲಿ ಆಕೆಯ ಚಿತ್ರಗಳನ್ನೂ ಪೋಸ್ಟ್​ ಮಾಡಿ ಮಾನಹಾನಿಕರವಾಗಿ ಬರಹಗಳನ್ನು ಹಾಕಿದ್ದನಂತೆ.


ಇದರ ಬಗ್ಗೆ ಅಥಿರಾ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ತುಂಬಾ ಬೇಸರಗೊಂಡಿದ್ದ ಆಕೆ ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಥಿರಾಳ ಸಾವಿನ ಸುದ್ದಿ ಕೇಳಿದ ಅರುಣ್ ವಿದ್ಯಾಧರನ್ ಸದ್ಯ ಪರಾರಿಯಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.  


ಇದನ್ನೂ ಓದಿ: Sharad Pawar Resigns: ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.