ಯಮುನಾನಗರ: ಕಳೆದ 20 ದಿನಗಳ ಹಿಂದೆಯೇ ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ. 


COMMERCIAL BREAK
SCROLL TO CONTINUE READING

ವ್ಯಕ್ತಿಯೊಬ್ಬ ಆಕೆಯನ್ನು ಅಪಹರಿಸಿ, ಅಸಭ್ಯವಾಗಿ ನಡೆದುಕೊಂಡ ಬಗ್ಗೆ ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಆದರೆ 20 ದಿನ ಕಳೆದರೂ ಪೊಲೀಸರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮಹಿಳೆಯ ಸಾವಿನ ಬಳಿಕ ಮಂಗಳವಾರ ತಡರಾತ್ರಿಯವರೆಗೂ ಆಕೆಯ ಕುಟುಂಬಸ್ಥರು ಪೋಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು.


"ನಾವು ಆ ವ್ಯಕ್ತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ ಅವರು ಆತನ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ನಂತರ ನಾವು ಯಮುನಾನಗರದ ಪೊಲೀಸ್ ಅಧೀಕ್ಷಕರನ್ನು (ಎಸ್ಪಿ) ಸಂಪರ್ಕಿಸಿ ಜಥ್ಲಾನಾ ಪೊಲೀಸ್ ಠಾಣೆಗೆ ಈ ಬಗ್ಗೆ ತನಿಖೆ ನಡೆಸಿದ ನಂತರ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿತ್ತು. ಆದರೆ ಎಸ್‌ಪಿಗೆ ದೂರು ದಾಖಲಿಸಿದ 20 ದಿನಗಳ ನಂತರವೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ"ಎಂದು ಮೃತ ಮಹಿಳೆಯ ಚಿಕ್ಕಪ್ಪ ಹೇಳಿದ್ದಾರೆ.


"ಆರೋಪಿ ಮನೋಜ್ ಮತ್ತು ಅವರ ಆರು ಸಹಚರರನ್ನು ಶೀಘ್ರದಲ್ಲೇ ಬಂಧಿಸಬೇಕು ಮತ್ತು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು" ಎಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.