ರಾಜಸ್ತಾನದ 40 ರ ಹರೆಯದ ಮಹಿಳೆಯ ಮೇಲೆ ಗ್ಯಾಂಗ್ ರೇಪ್
ಬರಾನ್: ರಾಜಾಸ್ಥಾನದ ಕೋಟಾ ನಗರದ ಹತ್ತಿರ ಮಹಿಳೆಯೊಬ್ಬಳು ಪಟ್ಟಣದಿಂದ ಗ್ರಾಮಕ್ಕೆ ತೆರಳುವಾಗ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ಆರೋಪಿಸಿ 40 ರ ಹರೆಯದ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
ಮಹಿಳೆಯು ಹೇಳುವಂತೆ ಅತ್ಯಾಚಾರದ ಕೃತ್ಯವನ್ನು ಆರೋಪಿಗಳು ಮೊಬೈಲ್ ಮೂಲಕ ರೆಕಾರ್ಡ್ ಮಾಡಿ ಅದನ್ನು ಇತರ ಮೊಬೈಲ್ ಫೋನ್ ಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಅವರು ದೂರು ನೀಡಿದ್ದಾರೆ.
ಈಗಾಗಲೇ ಈ ಘಟನೆಯ ಕುರಿತು ದೂರು ದಾಖಲಿಸಿಕೊಂಡಿರುವ ಬರಾನ್ ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.