ಸೀತಾಪುರ: ಉತ್ತರ ಪ್ರದೇಶದ ಸೀತಾಪುರದಲ್ಲಿ ಮಹಿಳೆಯೊಬ್ಬಳು ತನ್ನ ಎರಡು ತಿಂಗಳ ಮಗಳನ್ನು ತನ್ನ ಮನೆಯಲ್ಲಿ ಸಮಾಧಿ ಮಾಡಿದ ನಂತರ ತನ್ನ ಮನೆಗೆ ಬೆಂಕಿ ಹಚ್ಚಿದ್ದಾಳೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಮಧುಬನ್ ಸಿಂಗ್ ಹೇಳಿದ್ದಾರೆ.
"ಮಗಳು ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಮತ್ತು ಯಾವುದೇ ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವಳು ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು. ಮಗಳು ತೀರಿಕೊಂಡ ನಂತರ, ತನ್ನ ನೆರೆಹೊರೆಯವರಿಗೆ ಈ ಬಗ್ಗೆ ತಿಳಿಸಿ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾಳೆ" ಎಂದು ಪೊಲೀಸ್ ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈಗ ಮಗುವಿನ ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಹೇಳಿದರು."ಮಹಿಳೆಯ ಮಗಳ ಶವವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮಹಿಳೆಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ" ಎಂದು ಸಿಂಗ್ ಹೇಳಿದರು. ಘಟನೆಯ ವಿಚಾರವಾಗಿ ಇನ್ನು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.